ಶನಿವಾರ, ಅಕ್ಟೋಬರ್ 1, 2022
23 °C

ಜಮ್ಮು–ಕಾಶ್ಮೀರದ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ: ಗುಲಾಂ ನಬಿ ನಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ/ಜಮ್ಮು: ಜಮ್ಮು–ಕಾಶ್ಮೀರದ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ನೇಮಕ ಮಾಡಿದ್ದಾರೆ. ಆದರೆ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಆಜಾದ್‌ ನಿರಾಕರಿಸಿದ್ದಾರೆ.

 ಇದೇ ವೇಳೆ ಆಜಾದ್‌ ನಿಕಟವರ್ತಿ, ವಿಕಾರ್‌ ರಸೋಲ್‌ ವಾನಿ ಅವರನ್ನು ಜಮ್ಮು–ಕಾಶ್ಮೀರ ಘಟಕದ ಮುಖ್ಯಸ್ಥರಾಗಿ ನೇಮಕ ಮಾಡಿದ್ದಾರೆ. ನಾಯಕತ್ವ ಬದಲಾವಣೆ ಸೇರಿ ಪಕ್ಷದಲ್ಲಿ ಆಮೂಲಾಗ್ರ ಬದಲಾವಣೆಗೆ ಆಗ್ರಹಿಸಿದ್ದ 23 ಮಂದಿ ಬಂಡಾಯ ನಾಯಕರಲ್ಲಿ ಆಜಾದ್‌ ಸಹ ಒಬ್ಬರು.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು