ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಲಸಿಕೆ ಮೇಲೆ ಸೋನಿಯಾ, ರಾಹುಲ್‌ಗೆ ನಂಬಿಕೆಯಿಲ್ಲ: ಪ್ರಲ್ಹಾದ ಜೋಶಿ

Last Updated 9 ಜೂನ್ 2021, 2:56 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗವನ್ನು ನಿರ್ಮೂಲನೆ ಮಾಡಲು ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಕೋವಿಡ್-19 ಲಸಿಕೆ ಮೇಲೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಂಬಿಕೆಯಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ಈ ಕಾರಣಕ್ಕಾಗಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕೋವಿಡ್ ಲಸಿಕೆ ಸ್ವೀಕರಿಸಿಲ್ಲ ಎಂದು ಬಿಜೆಪಿ ಮುಖಂಡ ವಾಗ್ದಾಳಿ ನಡೆಸಿದ್ದಾರೆ.

'ನಾವು ಜನವರಿಯಲ್ಲಿ ವ್ಯಾಕ್ಸಿನೇಷನ್ ಆರಂಭಿಸಿದಾಗ, ಕಾಂಗ್ರೆಸ್ ನಾಯಕರು ಲಸಿಕೆ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಈಗ ಅವರು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ನನ್ನ ಅರಿವಿಗೆ ಬಂದ ಪ್ರಕಾರ ಸೋನಿಯಾ ಹಾಗೂ ರಾಹುಲ್ ಲಸಿಕೆ ಹಾಕಿಸಿಕೊಂಡಿಲ್ಲ. ಅವರಿಗೆ ಭಾರತದ ಲಸಿಕೆ ಮೇಲೆ ನಂಬಿಕೆಯಿಲ್ಲ' ಎಂದು ಜೋಶಿ ಆರೋಪಿಸಿದ್ದಾರೆ.

ಜೂನ್ 21ರಿಂದ 18 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಘೋಷಿಸಿದ್ದರು. ಈ ಲಸಿಕೆಗಳನ್ನು ರಾಜ್ಯಗಳಿಗೆ ಕೇಂದ್ರವೇ ಪೂರೈಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT