ಶುಕ್ರವಾರ, ಸೆಪ್ಟೆಂಬರ್ 25, 2020
22 °C
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒತ್ತಾಯ, ರಾಹುಲ್ ಅನುಮೋದನೆ

ಪರಿಸರ ವಿಶ್ಲೇಷಣೆ ಕರಡು ಅಧಿಸೂಚನೆ ಹಿಂಪಡೆಯಲು ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಪರಿಸರ– ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತದ ಪರಿಸರ ನಿಯಮಗಳಿಗೆ ಅಪಾಯತಂದೊಡ್ಡುವಂತಹ ‘ಪರಿಸರದ ಮೇಲಿನ ಪರಿಣಾಮಗಳ ವಿಶ್ಲೇಷಣೆ ಕರಡು ಅಧಿಸೂಚನೆ–2020’ಯನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಮುಖಂಡರಾದ ಸೋನಿಯಾಗಾಂಧಿ ಮತ್ತು ರಾಹುಲ್‌ ಗಾಂಧಿ, ಆ ಕರಡು ಅಧಿಸೂಚನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಪರಿಸರದ ಮೇಲಿನ ಪರಿಣಾಮಗಳ ವಿಶ್ಲೇಷಣಾ ಅಧಿಸೂಚನೆ 2020 ಕುರಿತು ಪ್ರಕಟಣೆಯಾಗಿರುವ ಲೇಖನವೊಂದರಲ್ಲಿ ಸೋನಿಯಾ ಗಾಂಧಿ ಅವರು, ‘ಸರ್ಕಾರದ ಈ ಅಧಿಸೂಚನೆ ಕುರಿತು ಸಾರ್ವಜನಿಕರಿಂದ ಆಕ್ಷೇಪಗಳು ವ್ಯಕ್ತವಾಗಿವೆ. ಇದರಲ್ಲಿರುವ ಅಂಶಗಳು ಭಾರತದ ಪರಿಸರ ನಿಯಮಗಳಿಗೆ ವಿರುದ್ಧವಾಗಿವೆ. ಮೊದಲು ಸರ್ಕಾರ ಈ ಕರಡು ಅಧಿಸೂಚನೆಯನ್ನು ಹಿಂಪಡೆಯಬೇಕು. ನಂತರ, ಸಾರ್ವಜನಿಕ ಸಮಾಲೋಚನೆ ಮೂಲಕ ಈ ಅಧಿಸೂಚನೆಯನ್ನು ರಾಷ್ಟ್ರೀಯ ಕಾರ್ಯಸೂಚಿಯನ್ನಾಗಿಸಬೇಕು. ಈ ಮೂಲಕ ಭಾರತ, ಜಾಗತಿಕ ತಾಪಮಾನ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಇದನ್ನು ರಾಹುಲ್‌ ಗಾಂಧಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡು, ‘ಪ್ರಕೃತಿ ಮಾತೆಯನ್ನು ನಾವು ರಕ್ಷಿಸಿದರೆ, ಆಕೆ ನಮ್ಮನ್ನು ರಕ್ಷಿಸುತ್ತಾಳೆ’ ಎಂದು ಅಡಿ ಬರಹ ಬರೆದಿದ್ದಾರೆ. ಜತೆಗೆ, ‘ಈ ಅಧಿಸೂಚನೆಯನ್ನು ತಕ್ಷಣ ಸರ್ಕಾರ ಹಿಂಪಡೆಯಬೇಕು’ ಎಂದು ಹೇಳುವ ಮೂಲಕ ಸೋನಿಯಾ ಗಾಂಧಿಯವರ ಒತ್ತಾಯವನ್ನು ಅನುಮೋದಿಸಿದ್ದಾರೆ.

ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ‘ಇದು ಕರಡು ಅಧಿಸೂಚನೆ. ಇದೇ ಅಂತಿಮವಲ್ಲ. ಈ ಅಧಿಸೂಚನೆಗೆ ಸಂಬಂಧಿಸಿದಂತೆ ದೇಶದಾದ್ಯಂತ ಸಾರ್ವಜನಿಕರಿಂದ ಸಾವಿರಾರು ಸಲಹೆಗಳು ವ್ಯಕ್ತವಾಗಿವೆ’ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಮಾರ್ಚ್‌ ತಿಂಗಳಲ್ಲಿ ಪ್ರಕಟಿಸಿದ ಈ ಅಧಿಸೂಚನೆಗೆ ಸಾರ್ವಜನಿಕ ವಲಯದಿಂದ ಸಾವಿರಾರು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು