ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾದಲ್ಲಿ ಬಸ್‌ ಅಪಘಾತ: 20 ಮಂದಿ ಸಾವು

Last Updated 14 ಫೆಬ್ರುವರಿ 2023, 12:50 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್‌ (ರಾಯಿಟರ್ಸ್‌): ‘ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದಲ್ಲಿ ಸೋಮವಾರ ಬಸ್‌ ಹಾಗೂ ವ್ಯಾನ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 20 ಮಂದಿ ಸಾವಿಗೀಡಾಗಿದ್ದು ಗಾಯಗೊಂಡಿರುವ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

‘ಅಪಘಾತದ ನಂತರ ಸೇತುವೆಯಿಂದ ಬಸ್ ನದಿಗೆ ಉರುಳಿಬಿದ್ದಿತು. ರಸ್ತೆಯ ಪಕ್ಕದಲ್ಲಿ ಮೂರು ಹಾಗೂ ನದಿಯಲ್ಲಿ 16 ಮೃತದೇಹಗಳು ಪತ್ತೆಯಾಗಿವೆ. ಆಸ್ಪತ್ರೆಗೆ ಕರೆದುಕೊಂಡು ಹೋದ 69 ಮಂದಿ ಗಾಯಾಳುಗಳ ಪೈಕಿ ಒಬ್ಬರು ಮೃತಪಟ್ಟಿದ್ದಾರೆ’ ಎಂದು ತುರ್ತು ವೈದ್ಯಕೀಯ ಚಿಕಿತ್ಸಾ ಕೇಂದ್ರ ಹೇಳಿಕೆಯಲ್ಲಿ ತಿಳಿಸಿದೆ.

‘ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ವಿಪರೀತ ಮಳೆಯಾಗಿದೆ’ ಎಂದೂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT