ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಲಾಯಂ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಸೊಸೆ ಡಿಂಪಲ್‌ರಿಂದ ನಾಳೆ ನಾಮಪತ್ರ

Last Updated 13 ನವೆಂಬರ್ 2022, 11:28 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದ ಮೇನ್‌ಪುರಿ ಲೋಕಸಭಾ ಉಪಚುನಾವಣೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿಂಪಲ್‌ ಯಾದವ್‌ ಅವರು ಸೋಮವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆಂದು ಪಕ್ಷದ ಹಿರಿಯ ನಾಯಕರು ತಿಳಿಸಿದ್ದಾರೆ.

1996ರಿಂದಸಮಾಜವಾದಿ ಪಕ್ಷವು ಮುಲಾಯಂ ಸಿಂಗ್ ಯಾದವ್‌ ಅವರ ಭದ್ರಕೋಟೆಯಲ್ಲಿತ್ತು. ಅವರ ನಿಧನದ ನಂತರ ನಡೆಯುತ್ತಿರುವಮೇನ್‌ಪುರಿ ಲೋಕಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಅವರ ಸೊಸೆ,ಅಖಿಲೇಶ್‌ ಯಾದವ್ ಅವರ ಪತ್ನಿ ಡಿಂಪಲ್‌ ಯಾದವ್‌ ಅವರಿಗೆ ಟಿಕೆಟ್‌ ನೀಡಿದೆ.

ನ.17 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಉಪಚುನಾವಣೆಯು ಡಿ.5 ರಂದು ನಡೆಯಲಿದೆ. ಫಲಿತಾಂಶವು ಡಿ.8 ರಂದು ಹೊರಬೀಳಲಿದೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್‌ ಯಾದವ್ ಅಕ್ಟೋಬರ್‌ 10 ರಂದು ಕೊನೆಯುಸಿರೆಳೆದಿದ್ದರು. ಅವರ ಸ್ಥಾನವನ್ನು ಭರ್ತಿ ಮಾಡಲು ಡಿ.5 ರಂದು ಉಪಚುನಾವಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT