ಬುಧವಾರ, ಆಗಸ್ಟ್ 4, 2021
22 °C

ಸಣ್ಣ ಪಕ್ಷಗಳೊಂದಿಗೆ ಎಸ್‌ಪಿ ಮೈತ್ರಿ: ಅಸಹಾಯಕತೆಯ ಸಂಕೇತ ಎಂದ ಮಾಯಾವತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಉತ್ತರ ಪ್ರದೇಶ ವಿಧಾನಸಭೆಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಗಾಗಿ ಸಣ್ಣಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಮಾಜವಾದಿ ಪಕ್ಷದ ನಿರ್ಧಾರ ಆ ಪಕ್ಷದ ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಶುಕ್ರವಾರ ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪ್ರಮುಖ ರಾಜಕೀಯ ಪಕ್ಷಗಳೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಇತ್ತೀಚೆಗೆ ಹೇಳಿದ್ದರು.

ಈ ಹಿಂದೆ ನಡೆದ ಚುನಾವಣೆಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಮೈತ್ರಿ ಸಾಧಿಸಿ, ಚುನಾವಣೆ ಎದುರಿಸಿದ್ದರೂ, ಯಾವ ಪಕ್ಷಕ್ಕೂ ನಿರೀಕ್ಷಿತ ಫಲಿತಾಂಶ ಸಿಕ್ಕಿರಲಿಲ್ಲ. ಈ ಕಹಿ ಅನುಭವದ ಕಾರಣದಿಂದಾಗಿ, ಪ್ರಮುಖ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ಹಿಂಜರಿಯುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

‘ತನ್ನ ಸ್ವಾರ್ಥ ಹಾಗೂ ಸಂಕುಚಿತ ದೃಷ್ಟಿಕೋನದ ಫಲವಾಗಿ ಸಮಾಜವಾದಿ ಪಕ್ಷ ಈ ಹಿಂದಿನ ಚುನಾವಣೆಗಳಲ್ಲಿ ಸೋಲು ಕಂಡಿದೆ. ಅದರಲ್ಲೂ, ಪರಿಶಿಷ್ಟರ ವಿರೋಧಿ ನಿಲುವು, ಅದರ ಕಾರ್ಯವೈಖರಿಯಿಂದಾಗಿ ಇತರ ಪಕ್ಷಗಳು ಸಮಾಜವಾದಿ ಪಕ್ಷದ ಜೊತೆ ಮೈತ್ರಿಗೆ ಮುಂದಾಗುತ್ತಿಲ್ಲ’ ಎಂದು ಮಾಯಾವತಿ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು