ಬುಧವಾರ, ಮೇ 18, 2022
23 °C

ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ಶಾಸಕ ಸುಭಾಷ್‌ ರಾಯ್ ಬಿಜೆಪಿಗೆ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಮಾಜವಾದಿ ಪಕ್ಷದ ಶಾಸಕ ಸುಭಾಷ್‌ ರಾಯ್‌ ಸೋಮವಾರ ಬಿಜೆಪಿ ಸೇರಿದರು.

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ, ದಿನೇಶ್ ಶರ್ಮಾ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್‌ ಅವರು ರಾಯ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಜಲಾಲ್‌ಪುರ ಕ್ಷೇತ್ರದ ಶಾಸಕರಾದ ರಾಯ್‌ ಈ ಮೊದಲು ಬಿಜೆಪಿ ಸದಸ್ಯರಾಗಿದ್ದರು. ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಸ್ವತಂತ್ರ ದೇವ್‌ ಸಿಂಗ್‌, ರಾಯ್‌ಗೆ ಇದು ‘ಘರ್‌ ವಾಪಸಿ’ ಎಂದು ಹೇಳಿದರು.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆ. ಶಾಂತಿ ಮತ್ತು ರಾಷ್ಟ್ರೀಯತೆಯ ಸ್ಫೂರ್ತಿ ಇದೆ. ಈ ಎಲ್ಲಾ ಕಾರಣಕ್ಕೆ ರಾಯ್‌ ಬಿಜೆಪಿ ಸೇರಿದ್ದಾರೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು