ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಜನ ತಲೆ ತಗ್ಗಿಸುವಂಥ ಕೆಲಸ ಮಾಡಿಲ್ಲ: ಮೋದಿ

Last Updated 28 ಮೇ 2022, 19:31 IST
ಅಕ್ಷರ ಗಾತ್ರ

ರಾಜ್‌ಕೋಟ್‌: ‘ಎಂಟು ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಜನರು ನಾಚಿಕೆಯಿಂದ ತಲೆ ತಗ್ಗಿಸುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

ರಾಜ್‌ಕೋಟ್‌ ಜಿಲ್ಲೆಯ ಅತ್ಕೋಟ್‌ ನಗರದಲ್ಲಿ ಶನಿವಾರ 200 ಹಾಸಿಗೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದ ಯಾವುದೇ ಪ್ರಜೆ ತಲೆತಗ್ಗಿಸುವಂತಹ ಕೆಲಸವನ್ನು ನಾನು ವೈಯಕ್ತಿಕವಾಗಿ ಮಾಡಿಲ್ಲ ಮತ್ತು ಇತರರಿಗೆಮಾಡಲು ಅವಕಾಶವನ್ನೂ ಕೊಟ್ಟಿಲ್ಲ’ ಎಂದು ಅವರು ತಿಳಿಸಿದರು.

‘ನಾವು ಈ ಎಂಟು ವರ್ಷಗಳ ಅವಧಿಯಲ್ಲಿ ಮಹಾತ್ಮ ಗಾಂಧಿ ಮತ್ತು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಕನಸಿನಂತೆ ದೇಶವನ್ನು ಕಟ್ಟುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ’ ಎಂದು ಪ್ರಧಾನಿ ಹೇಳಿದರು.

‘ಈ ಅವಧಿಯಲ್ಲಿ ಸರ್ಕಾರ ಬಡವರ ಉನ್ನತಿಗಾಗಿ ಶ್ರಮಿಸಿದೆ. ನಾವು ಬಡವರ ಪರವಾದ ವಿವಿಧ ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸುವ ಮೂಲಕ ದೇಶದ ಬಡವರಿಗೆ ಸೇವೆ ಸಲ್ಲಿಸಿದ್ದೇವೆ. ಈ ಮೂಲಕ ಅವರ ಜೀವನ ಉತ್ತಮಗೊಳಿಸಲು ಪ್ರಯತ್ನಿಸಿದ್ದೇವೆ’ ಎಂದರು.

ಕೋವಿಡ್‌–19ರ ಸಾಂಕ್ರಾಮಿಕದ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಆಹಾರ ಧಾನ್ಯಗಳನ್ನು ಒದಗಿಸಿದೆ. ಅಲ್ಲದೆ ದೇಶದ ಪ್ರತಿ ನಾಗರಿಕರಿಗೂ ಲಸಿಕೆಯನ್ನೂ ಹಾಕಿಸಿದ್ದೇವೆ ಎಂದು ಹೇಳಿದರು.

‘ಮಹಾತ್ಮ ಗಾಂಧಿಯವರು ಬಡವರು, ದಲಿತರು, ಆದಿವಾಸಿಗಳು ಮತ್ತು ಮಹಿಳೆಯರು ಸಬಲೀಕರಣಗೊಳ್ಳುವ ಭಾರತವನ್ನು ಬಯಸಿದ್ದರು.ಸ್ವಚ್ಛ ಮತ್ತು ಸ್ವಸ್ಥ ಭಾರತ ಹಾಗೂ ಸ್ವದೇಶಿ ಆರ್ಥಿಕ ವ್ಯವಸ್ಥೆಯ ಕನಸನ್ನು ಅವರು ಕಂಡಿದ್ದರು. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ಎಲ್ಲ ಕ್ಷೇತ್ರಗಳಲ್ಲೂ ಕಾರ್ಯ ನಿರ್ವಹಿಸುತ್ತಿದೆ’ ಎಂದರು.

‘ನಾನು ಬಡತನದ ಬಗ್ಗೆ ಪುಸ್ತಕಗಳನ್ನು ಓದಿ ಅಥವಾ ದೂರದರ್ಶನ ನೋಡಿ ತಿಳಿದುಕೊಂಡವನಲ್ಲ. ಬದಲಿಗೆ ಬಡತನದಲ್ಲಿಯೇ ಬೆಳೆದು ಬಂದವನು‘ ಎಂದು ಮೋದಿ ಇದೇ ವೇಳೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT