ಸೋಮವಾರ, ಜೂನ್ 21, 2021
21 °C

ಎಸ್‌ಪಿಬಿ ಅಪಾಯದಿಂದ ಪಾರಾಗಿದ್ದಾರೆ: ರಜನಿಕಾಂತ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಅಪಾಯದಿಂದ ಪಾರಾಗಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ  ಚಿತ್ರನಟ, ಸೂಪರ್‌ಸ್ಟಾರ್‌ ರಜನಿಕಾಂತ್‌ ಹೇಳಿದ್ದಾರೆ.

‘ಬಾಲು ಸಾರ್‌ ಆದಷ್ಟು ಬೇಗ ಗುಣಮುಖರಾಗಿರಿ’ ಎಂದು ರಜನಿಕಾಂತ್‌ ಅವರು ಟ್ವೀಟ್‌ ಮಾಡಿದ್ದಾರೆ.ಅಲ್ಲದೆ ಇದರೊಂದಿಗೆ ಸಣ್ಣ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಬಾಲಸುಬ್ರಹ್ಮಣ್ಯಂ ಅವರು‌ ಅಪಾಯದಿಂದ ಪಾರಾಗಿದ್ದಾರೆ ಎಂಬ ವಿಷಯ ನನಗೆ ತುಂಬಾ ಸಂತೋಷವನ್ನು ತಂದುಕೊಟ್ಟಿದೆ. ಕಳೆದ 50 ವರ್ಷಗಳಿಂದ ಬಾಲಸುಬ್ರಹ್ಮಣ್ಯಂ ಅವರು ಹಲವು ಭಾರತೀಯ ಭಾಷೆಗಳಲ್ಲಿ‌ ಹಾಡುಗಳನ್ನು ಹಾಡಿದ್ದಾರೆ. ತಮ್ಮ ಸುಮಧುರ ಧ್ವನಿಯಿಂದ ಕೋಟ್ಯಂತರ ಜನರ ಮುಖದಲ್ಲಿ ಹರುಷ ತಂದಿದ್ದಾರೆ’ ಎಂದು ರಜನಿಕಾಂತ್‌ ಅವರು ಟ್ವೀಟ್‌ ಮಾಡಿದ್ದಾರೆ.

ಕಳೆದ ಆಗಸ್ಟ್ 5ರಂದು ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು