ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಪಿಬಿ ಆರೋಗ್ಯ ಇನ್ನೂ ಗಂಭೀರ

Last Updated 15 ಆಗಸ್ಟ್ 2020, 12:24 IST
ಅಕ್ಷರ ಗಾತ್ರ

ಚೆನ್ನೈ:ಕೋವಿಡ್‌–19 ಬಳಲುತ್ತಿರುವ ಖ್ಯಾತಗಾಯಕಎಸ್‌.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರವಾಗಿದ್ದು, ಜೀವರಕ್ಷಕ ವ್ಯವಸ್ಥೆಯೊಂದಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.

ಕೊರೊನಾ ಸೋಂಕು ದೃಢಪಟ್ಟ ಕಾರಣದಿಂದ ಆಗಸ್ಟ್‌ 5ರಂದು ಅವರನ್ನು ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬಾಲಸುಬ್ರಹ್ಮಣ್ಯಂ ಅವರಿಗೆ ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಸೇವೆಯ ಸಹಾಯಕ ನಿರ್ದೇಶಕಿ ಡಾ.ಅನುರಾಧ ಭಾಸ್ಕರನ್‌ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT