ಶನಿವಾರ, ಜನವರಿ 29, 2022
18 °C

ಜನರು ನೋವಿನಲ್ಲಿರುವಾಗ ಕೇಂದ್ರ ಸರ್ಕಾರ ನಿದ್ರಿಸುತ್ತಿದೆ: ರಾಹುಲ್‌ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಜನರ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರವು ನಿದ್ರಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

#SpeakUpForCovidNyay ಎಂಬ ಹ್ಯಾಶ್‌ಟ್ಯಾಗ್‌ ಬಳಸಿ ಶನಿವಾರ ಟ್ವೀಟ್‌ ಮಾಡಿರುವ ಅವರು, ‘ಜನರು ನೋವು ಮತ್ತು ಸಂಕಷ್ಟದಲ್ಲಿರುವಾಗ ಭಾರತ ಸರ್ಕಾರವು ನಿದ್ರಿಸುತ್ತಿದೆ. ಬನ್ನಿ ಅವರನ್ನು ಎಬ್ಬಿಸೋಣ‘ ಎಂದು ತಿಳಿಸಿದ್ದಾರೆ.

#SpeakUpForCovidNyay ಹ್ಯಾಶ್‌ಟ್ಯಾಗ್‌ ಅಡಿಯಲ್ಲಿ ದೇಶದಾದ್ಯಂತ ಟ್ವಿಟರ್‌ ಅಭಿಯಾನವನ್ನು ಕಾಂಗ್ರೆಸ್‌ ಆರಂಭಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಘಟಕವು, ‘ದೇಶಕ್ಕೆ ಕೊರೊನಾ ಸೋಂಕು ವಕ್ಕರಿಸಿದ ಮೊದಲ ದಿನದಿಂದಲೂ ಜನರನ್ನು ಪ್ರತಿ ಹಂತದಲ್ಲೂ ಜೀವ ಹಿಂಡಿದ್ದು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು. ಬೆಡ್, ವೆಂಟಿಲೇಟರ್, ಆಮ್ಲಜನಕ, ಕೊನೆಗೆ ಸ್ಮಶಾನದಲ್ಲಿಯೂ ಜನರನ್ನು ಸಾಲಿನಲ್ಲಿ ನಿಲ್ಲಿಸಿದರು. ಸರ್ಕಾರದ ಬೇಜವಾಬ್ದಾರಿಯಿಂದಾಗಿ ಪ್ರಾಣ ಬಿಟ್ಟವರ ಕುಟುಂಬಗಳಿಗೆ ₹4 ಲಕ್ಷ ಪರಿಹಾರ ನೀಡಲೇಬೇಕು‘ ಎಂದು ಒತ್ತಾಯಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು