ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಗಮವಾಗಿ ನಡೆಯದ ಮುಂಗಾರು ಅಧಿವೇಶನ: ಸ್ಪೀಕರ್ ಓಂ ಬಿರ್ಲಾ ಬೇಸರ

Last Updated 11 ಆಗಸ್ಟ್ 2021, 11:24 IST
ಅಕ್ಷರ ಗಾತ್ರ

ನವದೆಹಲಿ: ‘ಲೋಕಸಭೆಯ ಮುಂಗಾರು ಅಧಿವೇಶನ ಸುಗಮವಾಗಿ ನಡೆಯಲಿಲ್ಲ’ ಎಂದು ಸ್ಪೀಕರ್ ಓಂ ಬಿರ್ಲಾ ಅವರು ಬುಧವಾರ ಬೇಸರ ವ್ಯಕ್ತಪಡಿಸಿದರು.

ಲೋಕಸಭೆಯ ಮುಂಗಾರು ಅಧಿವೇಶನದ ಕಲಾಪವನ್ನು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು,‘ಸದನದ ಬಾವಿಯಲ್ಲಿ ಸದಸ್ಯರು ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುವುದು ಸದನದ ಸಂಪ್ರದಾಯಕ್ಕೆ ಅನುಗುಣವಾಗಿಲ್ಲ’ ಎಂದರು.

‘ಲೋಕಸಭೆ ಈ ಮುಂಗಾರು ಅಧಿವೇಶನದ ವೇಳೆ ಕೇವಲ 21 ಗಂಟೆಗಳ ಕಾಲ ಮಾತ್ರ ಕಾರ್ಯನಿರ್ವಹಿಸಿದೆ’ ಎಂದು ಅವರು ಹೇಳಿದರು.

ಜುಲೈ 19 ರಂದು ಅಧಿವೇಶನ ಆರಂಭವಾದಾಗಿನಿಂದಲೂ ವಿರೋಧ ಪಕ್ಷಗಳು ಪೆಗಾಸಸ್ ಗೂಢಚರ್ಯೆ, ಕೃಷಿ ಕಾಯ್ದೆಗಳು ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಸಿದವು. ಇದರಿಂದ ಕಲಾಪವನ್ನು ಹಲವು ಬಾರಿ ಮುಂದೂಡಲಾಯಿತು.

‘ನೂತನ ಸಂಸತ್ ಭವನ ನಿರ್ಮಾಣ ಕಾರ್ಯವು ಮುಂದಿನ ವರ್ಷ ಆಗಸ್ಟ್ 15ಕ್ಕಿಂತ ಮೊದಲು ಪೂರ್ಣಗೊಳ್ಳುವ ನಿರೀಕ್ಷೆಯಿದೆ’ ಎಂದು ಬಿರ್ಲಾ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT