ಶನಿವಾರ, ನವೆಂಬರ್ 28, 2020
19 °C

ಎನ್‌ಎಫ್‌ಎಸ್‌ ಮಾನ್ಯತೆ ವಿಚಾರಣೆಗೆ ವಿಶೇಷ ಪೀಠ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತ ಒಲಿಂಪಿಕ್ ಸಂಸ್ಥೆ ಸೇರಿದಂತೆ 41 ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ಗಳಿಗೆ ನೀಡಿರುವ ಮಾನ್ಯತೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗಾಗಿ ವಿಶೇಷ ಪೀಠವನ್ನು ಸ್ಥಾಪಿಸಲಾಗುವುದು ಎಂದು ದೆಹಲಿ ಹೈಕೋರ್ಟ್ ಗುರುವಾರ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್‌ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲನ್ ಈ ತೀರ್ಪು ನೀಡಿದೆ.

ವಕೀಲ ರಾಹುಲ್ ಮೆಹರಾ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಈಗಾಗಲೇ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ನಜ್ಮಿ ವಜೀರಿ ಅವರನ್ನು ಒಳಗೊಂಡ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿದೆ ಎಂದು ರಾಹುಲ್ ತಿಳಿಸಿದರು. ರಾಷ್ಟ್ರೀಯ ಕ್ರೀಡಾ ನೀತಿಯ ನಿಯಮಗಳನ್ನು ಗಾಳಿಗೆ ತೂರಿ 41 ಫೆಡರೇಷನ್‌ಗಳಿಗೆ ಮಾನ್ಯತೆ ನೀಡಲಾಗಿದೆ. ಅಕ್ರಮಗಳನ್ನು ನಡೆಸಿರುವ ಫೆಡರೇಷನ್‌ಗಳ ಮೇಲೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದೂ ಅವರು ವಿವರಿಸಿದರು. 

ಪ್ರತಿವಾದ ಮಂಡಿಸಿದ ಚೈತನ್ಯ ಗೋಸೇನ್, ‘ಫೆಡರೇಷನ್‌ಗಳಿಗೆ ಮಾನ್ಯತೆ ನೀಡಲು ಹೈಕೋರ್ಟ್‌ನ ಅನುಮತಿ ಅಗತ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿತ್ತು‘ ಎಂದು ಹೇಳಿದರು. ಫೆಡರೇಷನ್‌ಗಳಿಗೆ ಮಾನ್ಯತೆ ನೀಡುವ ಮುನ್ನ ಅನುಮತಿ ಪಡೆದುಕೊಂಡಿರಬೇಕು ಎಂದು ಫೆಬ್ರುವರಿ ಏಳರಂದು ನೀಡಿದ ತೀರ್ಪಿನಲ್ಲಿ ಹೈಕೋರ್ಟ್ ಹೇಳಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಸುಪ್ರಿಂ ಕೋರ್ಟ್ ಮೆಟ್ಟಿಲೇರಿತ್ತು. ಅನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 17ರಂದು ಸೂಚಿಸಿತ್ತು. ಅಕ್ಟೋಬರ್‌ನಲ್ಲಿ 41 ಫೆಡರೇಷನ್‌ಗಳಿಗೆ ಅನುಮತಿ ನೀಡಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು