ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರದ ಪ್ರಕರಣ: ಇಬ್ಬರು ಸಚಿವರು ಸೇರಿ ಐವರಿಗೆ ಸಮನ್ಸ್‌

Last Updated 1 ಸೆಪ್ಟೆಂಬರ್ 2021, 13:18 IST
ಅಕ್ಷರ ಗಾತ್ರ

ಕೋಲ್ಕತ್ತ: ನಾರದ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಇಬ್ಬರು ಸಚಿವರು ಮತ್ತು ಇತರ ಮೂವರಿಗೆ ವಿಶೇಷ ನ್ಯಾಯಾಲಯ ಬುಧವಾರ ಸಮನ್ಸ್‌ ನೀಡಿದೆ.

ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯ ನೀಡಿದ ದೂರಿನ ಅನ್ವಯ ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್‌ ಹಕಿಮ್‌ ಮತ್ತು ತೃಣಮೂಲ ಕಾಂಗ್ರೆಸ್‌ ಶಾಸಕ ಮದನ್‌ ಮಿತ್ರಾ, ಕೋಲ್ಕತ್ತದ ಮಾಜಿ ಮೇಯರ್‌ ಸೋವನ್‌ ಚಟರ್ಜಿ ಹಾಗೂ ಅಮಾನತುಗೊಂಡಿರುವ ಐಪಿಎಸ್‌ ಅಧಿಕಾರಿ ಎಸ್‌ಎಂಎಚ್‌ ಮಿರ್ಜಾ ಅವರಿಗೆ ಈ ಸಮನ್ಸ್ ನೀಡಲಾಗಿದೆ.

ನವೆಂಬರ್‌ 16ರಂದು ನ್ಯಾಯಾಲಯ ಮುಂದೆ ಹಾಜರಾಗುವಂತೆ ವಿಶೇಷ ಸಿಬಿಐ ನ್ಯಾಯಾಧೀಶರು ಆದೇಶಿಸಿದ್ದಾರೆ.

ಮುಖರ್ಜಿ, ಹಕಿಮ್‌ ಮತ್ತು ಮಿತ್ರಾ ಅವರಿಗೆ ಪಶ್ಚಿಮ ಬಂಗಾಳ ವಿಧಾನಭೆ ಸ್ಪೀಕರ್‌ ಅವರ ಮೂಲಕ ಸಮನ್ಸ್‌ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಉಳಿದವರಿಗೆ ನೇರವಾಗಿ ಅವರ ವಿಳಾಸಕ್ಕೆ ತಲುಪಿಸಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT