ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆ: 23ರಂದು ಕೇರಳ ವಿಧಾನಸಭೆ ವಿಶೇಷ ಅಧಿವೇಶನ

Last Updated 21 ಡಿಸೆಂಬರ್ 2020, 8:35 IST
ಅಕ್ಷರ ಗಾತ್ರ

ತಿರುವನಂತಪುರ: ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆ ಬಗ್ಗೆ ಚರ್ಚಿಸಲು ಡಿಸೆಂಬರ್‌ 23 ರಂದು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಲು ಸಿಪಿಐ (ಎಂ) ನೇತೃತ್ವದ ಎಲ್‌ಡಿಎಫ್ ಸರ್ಕಾರವು ಸೋಮವಾರ ನಿರ್ಧರಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ವೇಳೆ ವಿಶೇಷ ಸಭೆ ಕರೆಯುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡುವ ಬಗ್ಗೆಯೂ ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕೇರಳದ ಹಣಕಾಸು ಸಚಿವ ಥಾಮಸ್‌ ಐಸಾಕ್‌ ಅವರು, ಕೇರಳ ಸಚಿವ ಸಂಪುಟವು ಡಿಸೆಂಬರ್‌ 23ರಂದು ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದೆ. ಕೇರಳ ಸರ್ಕಾರವು ರೈತರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT