ಮಂಗಳವಾರ, ಡಿಸೆಂಬರ್ 7, 2021
20 °C

ಅಮರಿಂದರ್‌ ಸಿಂಗ್‌ ಹೊಸ ಪಕ್ಷ ನಾಳೆ ಘೋಷಣೆ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಅವರು ಬುಧವಾರ ಇಲ್ಲಿ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವ ನಿರೀಕ್ಷೆ ಇದೆ.

ಪಂಜಾಬ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಹತ್ತಿರ ಇರುವಾಗ ಈ ಬೆಳವಣಿಗೆ ನಡೆದಿದೆ.

ಸಿಂಗ್ ಅವರು ಶೀಘ್ರದಲ್ಲೇ ತಮ್ಮದೇ ಆದ ಪಕ್ಷ ಸ್ಥಾಪಿಸುವುದಾಗಿ ಕಳೆದ ವಾರವಷ್ಟೇ ಹೇಳಿಕೊಂಡಿದ್ದರು. ಕೇಂದ್ರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವನ್ನು ರೈತ ಹಿತಾಸಕ್ತಿಯಿಂದ ಬಗೆಹರಿಸಿದರೆ ಬಿಜೆಪಿಯೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವುದಾಗಿಯೂ ಹೇಳಿದ್ದರು.

ಕಳೆದ ತಿಂಗಳು ಕಾಂಗ್ರೆಸ್‌ ಪಕ್ಷದ ನಿರ್ಧಾರದಿಂದ ದಿಢೀರ್‌ ಪದತ್ಯಾಗ ಮಾಡಿದ ಅಮರಿಂದರ್ ಸಿಂಗ್, ಹೋಳಾಗಿರುವ ಅಕಾಲಿ ಗುಂಪುಗಳಂತಹ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು