ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಬಿನ್‌ನಲ್ಲಿ ಹೊಗೆ: ಜಬಲ್‌ಪುರಕ್ಕೆ ಹೊರಟಿದ್ದ ಸ್ಪೈಸ್‌ಜೆಟ್‌ ದೆಹಲಿಗೆ ವಾಪಸ್

Last Updated 2 ಜುಲೈ 2022, 6:28 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಿಂದ ಮಧ್ಯಪ್ರದೇಶದ ಜಬಲ್‌ಪುರಕ್ಕೆ ಹೊರಟಿದ್ದ ಸ್ಪೈಸ್‌ಜೆಟ್‌ ವಿಮಾನದ ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ತಕ್ಷಣ ಕೆಳಗಿಳಿದಿದೆ.

ಸ್ಪೈಸ್‌ಜೆಟ್‌ ವಿಮಾನವುಶನಿವಾರ ಬೆಳಿಗ್ಗೆ ಪ್ರಯಾಣವನ್ನು ಆರಂಭದಲ್ಲೇ ಮೊಟಕುಗೊಳಿಸಿ ಸುರಕ್ಷಿತವಾಗಿ ದೆಹಲಿ ವಿಮಾನ ನಿಲ್ದಾಣದಲ್ಲೇ ಕೆಳಗಿಳಿದಿದೆ. ವಿಮಾನವು ಸುಮಾರು 5000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ ಕ್ಯಾಬಿನ್‌ನಲ್ಲಿ ಹೊಗೆ ಬರುತ್ತಿರುವುದನ್ನು ವೈಮಾನಿಕ ಸಿಬ್ಬಂದಿ ಗಮನಿಸಿದ್ದಾರೆ. ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಇತ್ತೀಚೆಗಷ್ಟೇ ಸ್ಪೈಸ್‌ಜೆಟ್‌ನ ವಿಮಾನವೊಂದು ಹಾರಾಟದ ವೇಳೆ ಹಕ್ಕಿಯೊಂದು ಬಡಿದ ಪರಿಣಾಮ ಪಟ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

ವಿಮಾನದಲ್ಲಿ 185 ಮಂದಿ ಪ್ರಯಾಣಿಕರಿದ್ದರು. ನಾಲ್ವರು ವೈಮಾನಿಕ ಸಿಬ್ಬಂದಿ ಹಾಗೂ ಇಬ್ಬರು ಪೈಲೆಟ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT