ನವದೆಹಲಿ: ಬೆಳಗಾವಿಯಿಂದ ದೆಹಲಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನವೊಂದಕ್ಕೆ ಸೋಮವಾರ ಹಕ್ಕಿ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನವು ಬಳಿಕ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಕೆಳಗಿಳಿದಿದೆ. ಇದರಲ್ಲಿ 187 ಮಂದಿ ಪ್ರಯಾಣಿಕರಿದ್ದರು ಎಂದು ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸ್ಪೈಸ್ಜೆಟ್ನ ಬೋಯಿಂಗ್ 737-8 ಮ್ಯಾಕ್ಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಅಧಿಕಾರಿಗಳು ಹೇಳಿದ್ದಾರೆ.