ಸೋಮವಾರ, ನವೆಂಬರ್ 30, 2020
24 °C

ಚಿನ್ನ ಕಳ್ಳ ಸಾಗಣೆ ಪ್ರಕರಣ; ಶಿವಶಂಕರ್‌ ಕಸ್ಟಡಿ ಅವಧಿ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡು ಜಾರಿ ನಿರ್ದೇಶನಾಲಯದ ವಶದಲ್ಲಿರುವ ಐಎಎಸ್ ಅಧಿಕಾರಿ ಎಂ.ಶಿವಶಂಕರ್ ಅವರ ಕಸ್ಟಡಿಯ ಅವಧಿಯನ್ನು ಇಲ್ಲಿನ ವಿಶೇಷ ನಾಯಾಲಯ ಏಳು ದಿನಗಳವರೆಗೂ ವಿಸ್ತರಿಸಿದೆ.

ಈ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ ಹಾಗೂ ಶಿವಶಂಕರ್‌ ಅವರ ನಡುವೆ ನಡೆದ ಮಾತುಕತೆ ಬಗ್ಗೆ ತನಿಖೆ ನಡೆಸಲು ಶಿವಶಂಕರ್‌ ಅವರ ಕಸ್ಟಡಿಯನ್ನು ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಅರ್ಜಿಯನ್ನು ಪರಿಗಣಿಸಿದ ಕೋರ್ಟ್‌, ಶಿವಶಂಕರ್‌ ಅವರ ಕಸ್ಟಡಿಯನ್ನು ಮುಂದಿನ ಏಳು ದಿನಗಳವರೆಗೆ ವಿಸ್ತರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು