ಸೋಮವಾರ, ಮೇ 17, 2021
22 °C

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜುಗೆ ಕೋವಿಡ್ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

‘ಹಲವು ಬಾರಿ ಪರೀಕ್ಷೆಗೆ ಒಳಗಾದ ಬಳಿಕ ನನ್ನ ಕೋವಿಡ್ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ನಿಗಾ ವಹಿಸಿ, ಸ್ವಯಂ ಕ್ವಾರಂಟೈನ್ ಆಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ. ನಾನು ಚೆನ್ನಾಗಿದ್ದೇನೆ’ ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.

ರಿಜಿಜು ಅವರು ಉತ್ತರಾಖಂಡದ ತೆಹ್ರಿಯಲ್ಲಿ ಜಲ ಮತ್ತು ಸಾಹಸ ಕ್ರೀಡಾ ಸಂಸ್ಥೆಯೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿದ್ದರು. ಇತ್ತೀಚೆಗಷ್ಟೇ ಸೋಂಕಿನಿಂದ ಚೇತರಿಸಿಕೊಂಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತೀರಥ್‌ ಸಿಂಗ್ ರಾವತ್ ಸಹ ರಿಜಿಜು ಜತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಓದಿ: 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು