ಮಂಗಳವಾರ, ಸೆಪ್ಟೆಂಬರ್ 21, 2021
20 °C

ಸ್ಪುಟ್ನಿಕ್‌ ಲೈಟ್ ಕೋವಿಡ್ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಡಿಸಿಜಿಐ ಅನುಮತಿ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್–19 ವಿರುದ್ಧ ರಷ್ಯಾ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್‌ ಲೈಟ್ ಏಕ ಡೋಸ್ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಅನುಮತಿ ನೀಡಿದೆ.

ಸ್ಪುಟ್ನಿಕ್ ಲೈಟ್ ಕೋವಿಡ್ ವಿರುದ್ಧ ಶೇ 78.6ರಿಂದ ಶೇ 83.7ರಷ್ಟು ಪರಿಣಾಮಕಾರಿಯಾಗಿದೆ ಎಂಬ ಅಧ್ಯಯನ ವರದಿ ಇತ್ತೀಚೆಗೆ ಪ್ರಕಟವಾಗಿತ್ತು. ಅದರ ಬೆನ್ನಲ್ಲೇ ಡಿಸಿಜಿಐ ಅನುಮೋದನೆ ನೀಡಿದೆ.

ಓದಿ: 

ಅರ್ಜೆಂಟೀನಾದಲ್ಲಿ 40,000 ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಈ ವೇಳೆ ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಕಡಿಮೆ ಮಾಡುವಲ್ಲಿ ಸ್ಪುಟ್ನಿಕ್ ಲೈಟ್ ಶೇ 82.1ರಿಂದ ಶೇ 87.6ರಷ್ಟು ಪರಿಣಾಮಕಾರಿಯಾಗಿರುವುದು ತಿಳಿದುಬಂದಿತ್ತು.

ಸ್ಪುಟ್ನಿಕ್ ಲೈಟ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲು ಡಿಸಿಜಿಐ ತಜ್ಞರ ಸಮಿತಿ ಜುಲೈಯಲ್ಲಿ ನಿರಾಕರಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು