ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಆರ್ಥಿಕ ಸಂಕಷ್ಟ: ‌40,000 ಟನ್ ಅಕ್ಕಿ ಕಳುಹಿಸಿಕೊಡುತ್ತಿದೆ ಭಾರತ

Last Updated 2 ಏಪ್ರಿಲ್ 2022, 8:06 IST
ಅಕ್ಷರ ಗಾತ್ರ

ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾಕ್ಕೆ ತುರ್ತಾಗಿ 40,000 ಟನ್ ಅಕ್ಕಿ ಕಳುಹಿಸಿಕೊಡಲು ಭಾರತ ಮುಂದಾಗಿದೆ. ಅಕ್ಕಿಯ ಸಾಗಾಟ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ.

2.2 ಕೋಟಿ ಜನಸಂಖ್ಯೆ ಇರುವ ದ್ವೀಪ ರಾಷ್ಟ್ರ ಅತ್ಯಂತ ಕೆಟ್ಟ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇಂಧನ ಆಮದಿಗೆ ವಿದೇಶಿ ವಿನಿಮಯದ ತೀವ್ರ ಕೊರತೆ ಎದುರಾಗಿದೆ. ವಿದ್ಯುತ್ ಕೊರತೆಯಿಂದಾಗಿ ದಿನಕ್ಕೆ 13 ಗಂಟೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಅಗತ್ಯ ವಸ್ತುಗಳ ಆಮದಿಗೆ ಪಾವತಿ ಮಾಡಲು ಸಾಧ್ಯವಾಗದೆ ಜಾಗತಿಕ ನೆರವನ್ನು ಕೋರಿದೆ.

ವಿದ್ಯುತ್ ಉತ್ಪಾದನೆಗಾಗಿ 6,000 ಮೆಟ್ರಿಕ್ ಟನ್ ಇಂಧನವನ್ನೂ ಭಾರತವು ಶ್ರೀಲಂಕಾಕ್ಕೆ ಕಳುಹಿಸಿಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಅಂತರರಾಷ್ಟ್ರೀಯ ಹಣಕಾಸು ನಿಧಿಯ ನೆರವನ್ನೂ ಶ್ರೀಲಂಕಾ ಕೋರಿದೆ. ಭಾರತ, ಚೀನಾದಿಂದ ಸಾಲದ ನೆರವನ್ನೂ ಕೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT