ಭಾನುವಾರ, ಮೇ 16, 2021
24 °C

ಭಾರತದ 40 ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ರಾಮೇಶ್ವರಂ: ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ಭಾರತದ 54 ಮೀನುಗಾರರ ಪೈಕಿ 40 ಜನರು ಶುಕ್ರವಾರ ಬಿಡುಗಡೆಯಾಗಿದ್ದಾರೆ.

ಲಂಕಾ ನೌಕಾಪಡೆಯು ವಶಕ್ಕೆ ಪಡೆದಿದ್ದ ಐದು ದೋಣಿಗಳಲ್ಲಿ ನಾಲ್ಕು ದೋಣಿಗಳನ್ನು ಮರಳಿಸಲಾಗಿದೆ ಎಂದು ಮೀನುಗಾರಿಕೆ‌ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಪುದುಚೇರಿಯ ಕಾರೈಕಲ್ ಮೂಲದ 14 ಮೀನುಗಾರರು ಶ್ರೀಲಂಕಾ ವಶದಲ್ಲಿಯೇ ಇದ್ದು, ತಡವಾಗಿ ಅವರ ಬಿಡುಗಡೆಯಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮ್ಮ ರಾಷ್ಟ್ರದ ಜಲವಲಯದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ‌ಮೇಲೆ‌ ಶ್ರೀಲಂಕಾದ ನೌಕಾಪಡೆ ಬುಧವಾರ ರಾತ್ರಿ ಭಾರತದ 54 ಮೀನುಗಾರರನ್ನು ಬಂಧಿಸಿತ್ತು.

ಆಗಾಗ್ಗೆ ತಮಿಳುನಾಡಿನ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸುತ್ತಿರುವ ಕುರಿತು ಮೀನುಗಾರರ ಒಕ್ಕೂಟದ ಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀನುಗಾರರ ಶೀಘ್ರ ಬಿಡುಗಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮೀನುಗಾರರು ಆದಷ್ಟು ಬೇಗನೇ ಬಿಡುಗಡೆಯಾಗದಿದ್ದರೆ, ಮೀನುಗಾರಿಕೆ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ. ಏಪ್ರಿಲ್‌ 6ರ ತಮಿಳುನಾಡು ವಿಧಾನಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು