ಶನಿವಾರ, ಅಕ್ಟೋಬರ್ 23, 2021
20 °C

ಎಸ್‌ವಿಬಿಸಿ: ಕನ್ನಡ, ಹಿಂದಿ ಕಾರ್ಯಕ್ರಮಗಳ ಪ್ರಸಾರಕ್ಕೆ ಆಂಧ್ರ ಸಿಎಂ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುಪತಿ(ಆಂಧ್ರಪ್ರದೇಶ): ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ನಡೆಸುತ್ತಿರುವ ’ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್‌ನಲ್ಲಿ (ಎಸ್‌ವಿಬಿಸಿ) ಕನ್ನಡ ಮತ್ತು ಹಿಂದಿ ಭಾಷೆಗಳ ಕಾರ್ಯಕ್ರಮಗಳ ಪ್ರಸಾರಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್‌ ಮೋಹನ್‌ ರೆಡ್ಡಿ ಅವರು ಮಂಗಳವಾರ ಚಾಲನೆ ನೀಡಿದರು.

ತಿರುಪತಿ ತಿರುಮಲದಲ್ಲಿ ನಡೆದ ಉದ್ಘಾಟನಾ ಸಮಾರಂಭಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗಿತ್ತು. ಆದರೆ, ಅವರು ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.

ದಿನವೂ ಇಪ್ಪತ್ನಾಲ್ಕು ಗಂಟೆಗಳ ಕಾಲ ಭಕ್ತಿ ಪ್ರಧಾನ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಎಸ್‌ವಿಬಿಸಿ ವಾಹಿನಿ 2008ರಲ್ಲಿ ತೆಲುಗು ಕಾರ್ಯಕ್ರಮಗಳ ಪ್ರಸಾರದೊಂದಿಗೆ ಆರಂಭವಾಯಿತು. ಅಂದಿನ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಈ ವಾಹಿನಿಗೆ ಚಾಲನೆ ನೀಡಿದ್ದರು. ಇದಾದ ದಶಕದ ನಂತರ, ತಮಿಳು ಕಾರ್ಯಕ್ರಮಗಳ ಪ್ರಸಾರ ಆರಂಭವಾಯಿತು ಎಂದು ದೇವಾಲಯದ ಅಧಿಕಾರಿಗಳು ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದರು. ಈಗ  ಇದೇ ವಾಹಿನಿಯಲ್ಲಿ ಕನ್ನಡ ಮತ್ತು ಹಿಂದಿ ಭಾಷೆಗಳ ಕಾರ್ಯಕ್ರಮಗಳೂ ಪ್ರಸಾರವಾಗುತ್ತವೆ.

ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ತಿರುಪತಿ ಬೆಟ್ಟದಲ್ಲಿರುವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ, ದೇವಾಲಯ ಸಂಕೀರ್ಣದ ಹಿಂದೆ ₹12 ಕೋಟಿ ವೆಚ್ಚದಲ್ಲಿ ’ಲಡ್ಡು ಪ್ರಸಾದ’ ತಯಾರಿಕೆಗಾಗಿ ವಿಶೇಷವಾಗಿ ನಿರ್ಮಿಸಿರುವ ವಿಶಾಲವಾದ ಅತ್ಯಾಧುನಿಕ ಅಡುಗೆ ಮನೆಯನ್ನು ಉದ್ಘಾಟಿಸಿದರು. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು