ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಖಮರ್ವಾರಿ ಪ್ರದೇಶದಲ್ಲಿ ಗುಂಡು ಹಾರಿಸಿದಂಥ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಸ್ಥಳದಲ್ಲಿ ಪಹರೆ ಮತ್ತು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸರು ಗುರುವಾರ ತಿಳಿಸಿದರು.
‘ಖಮರ್ವಾರಿ ಪ್ರದೇಶದಲ್ಲಿ ಗುಂಡು ಹಾರಿಸಿದಂಥ ಸದ್ದು ಕೇಳಿತು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಮತ್ತು ಯಾರೂ ಗಾಯಗೊಂಡಿಲ್ಲ. ಸ್ಥಳದಲ್ಲಿ ಪಹರೆ ಮತ್ತು ಶೋಧ ಕಾರ್ಯಾಚರಣೆ ಜಾರಿ ಮಾಡಲಾಗಿದೆ’ ಎಂದು ಶ್ರೀನಗರ ಪೊಲಿಸರು ಟ್ವೀಟ್ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.