ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಕನಿಷ್ಠ ತಾಪಮಾನ ಮೈನಸ್‌ 7.8 ಡಿಗ್ರಿ ಸೆಲ್ಸಿಯಸ್‌ ದಾಖಲು

Last Updated 13 ಜನವರಿ 2021, 7:18 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚಳಿ ತೀವ್ರವಾಗಿ ಹೆಚ್ಚಿದ್ದು, ಶ್ರೀನಗರದಲ್ಲಿ ಬುಧವಾರ ಕನಿಷ್ಠ ತಾಪಮಾನವು ಮೈನಸ್‌ 7.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇದು 8 ವರ್ಷಗಳಲ್ಲಿ ದಾಖಲಾದ ಅತಿ ಕನಿಷ್ಠ ಉಷ್ಣಾಂಶವಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಇಷ್ಟೇ ತಾಪಮಾನವು 2012ರ ಜನವರಿ 14 ರಂದು ಶ್ರೀನಗರದಲ್ಲಿ ವರದಿಯಾಗಿತ್ತು ಎಂದು ಅವರು ಹೇಳಿದರು.

ಪ್ರವಾಸಿ ತಾಣ ಮತ್ತು ದಕ್ಷಿಣ ಕಾಶ್ಮೀರದ ವಾರ್ಷಿಕ ಅಮರನಾಥ ಯಾತ್ರೆಯ ಶಿಬಿರವಾದ ಪಹಲ್‌ಗಾಮ್‌ನಲ್ಲಿ ಬುಧವಾರ ತಾಪಮಾನವು ಮೈನಸ್ 11.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದಕ್ಕೂ ಮುಂದಿನ ದಿನ ಉಷ್ಣಾಂಶ ಮೈನಲ್‌ 5.6 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿತ್ತು.

ಗುಲ್‌ಮಾರ್ಗ್‌ನಲ್ಲಿ ಮಂಗಳವಾರ ರಾತ್ರಿ ಮೈನಸ್‌ 10 ರಿಂದ 11.2 ಡಿಗ್ರಿ ಸೆಲ್ಸಿಯಸ್‌ ಇತ್ತು.

ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಮೈನಸ್ 5.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ದಕ್ಷಿಣ ಕಾಶ್ಮೀರದ ಕೊಕರ್ನಾಗ್‌ನಲ್ಲಿ ಮೈನಸ್ 9.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT