ಶ್ರೀನಗರದಲ್ಲಿ ತಾಪಮಾನ ಮೈನಸ್ 2.2 ಡಿಗ್ರಿ ಸೆಲ್ಸಿಯಸ್ಗೆ ಕುಸಿತ

ಶ್ರೀನಗರ: ಶ್ರೀನಗರದಲ್ಲಿ ಸೋಮವಾರ ರಾತ್ರಿ ಮೈನಸ್ 2.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ಚಳಿಗಾಲದಲ್ಲಿ ಇಲ್ಲಿ ದಾಖಲಾಗಿರುವ ಅತ್ಯಂತ ಕಡಿಮೆ ತಾಪಮಾನ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಮೈನಸ್ 1.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು ಎಂದೂ ಹೇಳಿದ್ದಾರೆ.
ಉತ್ತರ ಕಾಶ್ಮೀರದ ಗುಲ್ಮಾರ್ಗ್ನಲ್ಲಿ ಮೈನಸ್1.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ಐದು ದಿನಗಳ ಕಾಲ ಇಲ್ಲಿ ಕನಿಷ್ಠ ತಾಪಮಾನವು ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ ಎಂದೂ ವಿವರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.