ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ‘ನೀಟ್’ ವಿನಾಯ್ತಿ ಕೋರಿ ಮತ್ತೆ ಮಸೂದೆ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಸಭೆ ನಿರ್ಣಯ
Last Updated 5 ಫೆಬ್ರುವರಿ 2022, 11:31 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನಲ್ಲಿ ‘ನೀಟ್’ ಪರೀಕ್ಷೆಗೆ ವಿನಾಯ್ತಿ ಕೋರಿ ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಮತ್ತೊಮ್ಮೆ ಮಸೂದೆ ಅಂಗೀಕರಿಸಲು ವಿಧಾನಸಭೆಯಲ್ಲಿ ಪ್ರಾತಿನಿಧ್ಯ ಹೊಂದಿರುವ ಪಕ್ಷಗಳ ಸಭೆಯು ಶನಿವಾರ ಸರ್ವಾನುಮತದಿಂದ ನಿರ್ಣಯ ಕೈಗೊಂಡಿತು.

ರಾಜ್ಯಪಾಲರು ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಲಿದ್ದಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು, ವಿಧಾನಸಭೆಯ ವಿಶೇಷ ಅಧಿವೇಶನ ಕರೆದು ಮಸೂದೆಯನ್ನು ಮತ್ತೊಮ್ಮೆ ಅಂಗೀಕರಿಸುವಂತೆ ನಿರ್ಣಯವನ್ನು ಅಂಗೀಕರಿಸಿತು.

ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆಯು ಈ ಸಭೆಯಲ್ಲಿ ಭಾಗವಹಿಸದಿದ್ದರೂ ರಾಜ್ಯದಲ್ಲಿ ‘ನೀಟ್’ ರದ್ದುಗೊಳಿಸುವ ಸರ್ಕಾರದ ನಿರ್ಣಯಕ್ಕೆ ತನ್ನ ಬೆಂಬಲವನ್ನು ನೀಡಿತು. ಬಿಜೆಪಿಯು ಸಭೆಗೆ ಗೈರುಹಾಜರಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT