ಚೆನ್ನೈ: ‘ವದಂತಿಗಳನ್ನು ಹರಡಲು ಹಾಗೂ ಆ ಮೂಲಕ ಕಾನೂನು ಸುವ್ಯವಸ್ಥೆ ಹದಗೆಡಿಸುವುದಕ್ಕಾಗಿಯೇ ಕೆಲ ರಾಜಕೀಯ ಶಕ್ತಿಗಳು ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುತ್ತಿವೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬಿಜೆಪಿ ವಿರುದ್ಧ ಮಂಗಳವಾರ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಐಸಿಟಿ ಅಕಾಡೆಮಿಯು ಮಂಗಳವಾರ ಹಮ್ಮಿಕೊಂಡಿದ್ದ 50ನೇ ಆವೃತ್ತಿಯ ‘ಬ್ರಿಜ್’ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ‘ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ತಮಿಳುನಾಡು ರಾಜ್ಯವನ್ನು ದೇಶದಲ್ಲಿ ಅಗ್ರಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ’ ಎಂದಿದ್ದಾರೆ.
‘ಯುವ ಸಮುದಾಯದವರು ತಮ್ಮ ಬೆಳವಣಿಗೆಗಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕೇ ಹೊರತು ಅದರ ಗುಲಾಮರಾಗಬಾರದು. ತಂತ್ರಜ್ಞಾನವನ್ನು ಬಳಸಿಕೊಂಡು ಜನರನ್ನು ವಂಚಿಸುವುದೂ ಸೇರಿದಂತೆ ಇತರೆ ಅಪರಾಧ ಚಟುವಟಿಕೆಗಳು ಈಗ ಹೆಚ್ಚಾಗಿವೆ. ಅಶ್ಲೀಲ ವೆಬ್‌ಸೈಟ್‌ಗಳೂ ಅಧಿಕ ಸಂಖ್ಯೆಯಲ್ಲಿ ತಲೆ ಎತ್ತಿವೆ. ರಮ್ಮಿಯಂತಹ ಆನ್‌ಲೈನ್ ಆಟಗಳಿಂದಾಗಿ ಜನರು ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ’ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.