ಭೋಪಾಲ: ಸ್ಟಾರ್ ಪ್ರಚಾರಕ ಎಂಬುದು ಯಾವುದೇ ಹುದ್ದೆ ಅಥವಾ ಸ್ಥಾನಮಾನವಲ್ಲ ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲನಾಥ್ ಶನಿವಾರ ಹೇಳಿದ್ದಾರೆ.

ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರದ ವೇಳೆ ಮಾದರಿ ಸಂಹಿತೆಯನ್ನು ಪದೇ ಪದೆ ಉಲ್ಲಂಘಿಸಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ 'ಸ್ಟಾರ್ ಪ್ರಚಾರಕ' ಸ್ಥಾನಮಾನವನ್ನು ಚುನಾವಣಾ ಆಯೋಗ ಶುಕ್ರವಾರ ರದ್ದುಪಡಿಸಿತ್ತು.

ಚುನಾವಣಾ ಆಯೋಗದ ಈ ನಿರ್ಧಾರದ ಕುರಿತು ಶನಿವಾರ ಸುದ್ದಿ ಸಂಸ್ಥೆ ಎಎನ್ಐ ಜೊತೆಗೆ ಮಾತನಾಡಿರುವ ಕಮಲನಾಥ್ 'ಸ್ಟಾರ್ ಪ್ರಚಾರಕ ಎಂಬುದು ಹುದ್ದೆ ಅಥವಾ ಸ್ಥಾನಮಾನವಲ್ಲ. ಚುನಾವಣೆ ಆಯೋಗದ ನಿರ್ಧಾರದ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ, ನವೆಂಬರ್ 10ರ (ಚುನಾವಣೆ ಫಲಿತಾಂಶ) ನಂತರ ನಾನು ಮಾತಾಡುತ್ತೇನೆ. ಕೊನೆಗೆ ಇಲ್ಲಿ ಜನರೇ ಅಂತಿಮ. ಅವರಿಗೆ ಎಲ್ಲವೂ ತಿಳಿದಿದೆ,' ಎಂದು ಅವರು ಹೇಳಿದ್ದಾರೆ.

'ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಅವರಿಗೆ ನೀಡಲಾದ ಸಲಹೆಯನ್ನು ಸಂಪೂರ್ಣ ಕಡೆಗಣಿಸಿದ್ದಕ್ಕಾಗಿ, ಕಮಲ್ನಾಥ್ ಅವರ ಸ್ಟಾರ್ ಪ್ರಚಾರಕ ಸ್ಥಾನಮಾನವನ್ನು ಈ ಉಪ ಚುನಾವಣೆಗೆ ಅನ್ವಯವಾಗುವಂತೆ ಈ ಕೂಡಲೇ ರದ್ದುಪಡಿಸಲಾಗಿದೆ,' ಎಂದು ಆಯೋಗ ಶುಕ್ರವಾರ ಆದೇಶ ಹೊರಡಿಸಿತ್ತು.

'ಸ್ಟಾರ್ ಪ್ರಚಾರಕರಾಗಿ ಕಮಲ್ನಾಥ್ ಅವರಿಗೆ ಯಾವುದೇ ಅನುಮತಿ ನೀಡುವುದಿಲ್ಲ,' ಎಂದು ಅದು ತಿಳಿಸಿತ್ತು.

'ಒಂದು ವೇಳೆ ಇಂದಿನಿಂದ ಕಮಲ್ನಾಥ್ ಅವರು ಯಾವುದೇ ಪ್ರಚಾರ ಕೈಗೊಂಡರೆ, ಪ್ರಯಾಣ, ವಾಸ್ತವ್ಯ ಮತ್ತು ಭೇಟಿಗೆ ಸಂಬಂಧಿಸಿದ ಸಂಪೂರ್ಣ ವೆಚ್ಚವನ್ನು ಸಂಬಂಧಿಸಿದ ಕ್ಷೇತ್ರದ ಅಭ್ಯರ್ಥಿಯೇ ಭರಿಸಬೇಕು,' ಎಂದು ಆಯೋಗ ಹೇಳಿತ್ತು.

ಇನ್ನು ಚುನಾವಣಾ ಆಯೋಗದ ಆದೇಶದ ವಿರುದ್ಧ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿತ್ತು.

ಇವುಗಳನ್ನು ಓದಿ

‘ಬಿಜೆಪಿ ಮಹಿಳಾ ಅಭ್ಯರ್ಥಿ ಐಟಂ’ ಎಂದ ಕಮಲನಾಥ್

ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ, ಬಿಜೆಪಿ ಜನರ ಹಾದಿ ತಪ್ಪಿಸುತ್ತಿದೆ: ಕಮಲನಾಥ್

ಕಾಂಗ್ರೆಸ್ ಮುಖಂಡ ಕಮಲನಾಥ್ 'ಐಟಂ' ಹೇಳಿಕೆಗೆ ರಾಹುಲ್ ಗಾಂಧಿ ಆಕ್ಷೇಪ

ಸಚಿವೆಗೆ ‘ಐಟಂ’ ಪದ ಬಳಕೆ: ಕಮಲ್ನಾಥ್ ವಿಷಾದ

ಬಿಜೆಪಿ ಅಭ್ಯರ್ಥಿಯನ್ನು 'ಐಟಂ' ಎಂದಿದ್ದ ಕಮಲ್ನಾಥ್ಗೆ ಚುನಾವಣೆ ಆಯೋಗ ನೊಟೀಸ್

'ಐಟಂ' ಹೇಳಿಕೆ ನೀಡಿದ್ದ ಕಮಲ್ ನಾಥ್ಗೆ ಸಲಹೆ ನೀಡಿದ ಚುನಾವಣಾ ಆಯೋಗ

ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ನಾಥ್ ಸ್ಟಾರ್ ಪ್ರಚಾರಕ ಸ್ಥಾನ ರದ್ದು

ಕಮಲ್ ನಾಥ್ ವರ್ತನೆಯಿಂದ ನನಗೆ ಆಶ್ಚರ್ಯವಾಗಿದೆ: ಜ್ಯೋತಿರಾದಿತ್ಯ ಸಿಂಧಿಯಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.