ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾರಾ ಹೋಟೆಲ್‌ಗಳು ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಆರೋಗ್ಯ ಇಲಾಖೆ ಸೂಚನೆ

Last Updated 30 ಮೇ 2021, 8:36 IST
ಅಕ್ಷರ ಗಾತ್ರ

ನವದೆಹಲಿ: ಖಾಸಗಿ ಆಸ್ಪತ್ರೆಗಳು ತಾರಾ ಹೋಟೆಲ್ ಸಹಯೋಗದಲ್ಲಿ ಲಸಿಕೆ ನೀಡುವ ಪ್ಯಾಕೇಜ್ ಘೋಷಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ರಾಷ್ಟ್ರೀಯ ಲಸಿಕೆ ಯೋಜನೆ ಅನುಸಾರ, ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಯ ಲಸಿಕಾ ಕೇಂದ್ರ, ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ, ಅಪಾರ್ಟ್‌ಮೆಂಟ್ ಸೊಸೈಟಿ ಸಮುಚ್ಛಯ, ಪಂಚಾಯತ್, ಹಿರಿಯ ನಾಗರಿಕರ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲು ಅವಕಾಶವಿದೆ.

ಆದರೆ ಕೆಲವೊಂದು ತಾರಾ ಹೋಟೆಲ್‌ಗಳಲ್ಲಿ ಖಾಸಗಿ ಆಸ್ಪತ್ರೆ ಸಹಯೋಗದಲ್ಲಿ ಲಸಿಕೆ ನೀಡಲು ಮುಂದಾಗುತ್ತಿರುವುದು ಕಂಡುಬಂದಿದೆ. ಅದಕ್ಕೆ ಅವಕಾಶವಿಲ್ಲ. ಅಂತಹ ವ್ಯವಸ್ಥೆ ಕಂಡುಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಆದೇಶ ಪ್ರತಿ
ಆದೇಶ ಪ್ರತಿ

ಅಲ್ಲದೆ, ಸರ್ಕಾರ ನಿಗದಿಪಡಿಸಿದ ರೀತಿಯಲ್ಲಿ, ಮಾರ್ಗಸೂಚಿ ಅನ್ವಯ ಲಸಿಕೆ ಪಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ನಾಗರಿಕರಿಗೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT