ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ದೂರವಾಣಿ ಕದ್ದಾಲಿಕೆಯಾಗಿಲ್ಲ; ರಾಜಸ್ಥಾನ ಸಚಿವರ ಸ್ಪಷ್ಟನೆ

Last Updated 13 ಜೂನ್ 2021, 16:36 IST
ಅಕ್ಷರ ಗಾತ್ರ

ಜೈಪುರ: ದೂರವಾಣಿ ಕದ್ದಾಲಿಕೆಯಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲಿಗ ಶಾಸಕನ ಆರೋಪವನ್ನು ರಾಜಸ್ಥಾನ ಸಾರಿಗೆ ಸಚಿವ ಪ್ರತಾಪ್ ಸಿಂಗ್ ಕಚಾರಿಯವಸ್ ತಳ್ಳಿ ಹಾಕಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ತೀವ್ರವಾಗಿ ಭುಗಿಲೆದ್ದಿದೆ. ಭಾನುವಾರದಂದು ಕೆಲವು ಶಾಸಕರ ದೂರವಾಣಿ ಕರೆಗಳು ಕದ್ದಾಲಿಕೆಯಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ವೇದ ಪ್ರಕಾಶ್ ಸೋಲಂಕಿ ಆರೋಪಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, 'ದೂರವಾಣಿ ಕದ್ದಾಲಿಕೆ ಮಾಡಲಾಗಿದೆ ಎಂಬ ಬಗ್ಗೆ ಶಾಸಕರಿಗೆ ಮಾಹಿತಿಯಿದ್ದರೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಿಳಿಸಬೇಕು' ಎಂದಿದ್ದಾರೆ.

'ರಾಜ್ಯ ಸರ್ಕಾರವು ಯಾರ ಫೋನ್ ಅನ್ನು ಕದ್ದಾಲಿಕೆ ಮಾಡುವುದಿಲ್ಲ. ಇದು ನಮ್ಮ ಸ್ವಭಾವವಲ್ಲ. ಇಬ್ಬರು ಮೂವರ ದೂರವಾಣಿ ಕರೆಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂದು ಶಾಸಕರೊಬ್ಬರು ಆರೋಪಿಸಿದ್ದಾರೆ. ಅಂತಹ ಸ್ಥಿತಿಯಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಅವರ ಗಮನಕ್ಕೆ ತರಬೇಕು' ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಇಡೀ ದೇಶಕ್ಕೆ ಮಾದರಿ ರಾಜ್ಯವಾಗಿ ಕಾಂಗ್ರೆಸ್ ಕೆಲಸ ನಿರ್ವಹಿಸಿದೆ. ಅಲ್ಲದೆ ಶಾಸಕರು ನೀಡುವ ಅಂತಹ ಹೇಳಿಕೆಯನ್ನು ಸಮರ್ಥಿಸಲಾಗುವುದಿಲ್ಲ ಎಂದಿದ್ದಾರೆ.

ಸಚಿನ್ ಪೈಲಟ್ ಅವರ ಬೆಂಬಲಿಗರಾಗಿರುವ ಸೋಲಂಕಿ, ಶಾಸಕರನ್ನು ಹೆಸರಿಸದೇ ದೂರವಾಣಿ ಕದ್ದಾಲಿಕೆಯ ಬಗ್ಗೆ ಆರೋಪ ಮಾಡಿದ್ದರು. ಅಲ್ಲದೆ ಶಾಸಕರಿಗೆ ವಿವಿಧ ಏಜೆನ್ಸಿಗಳಿಂದ ಸಿಲುಕಿಸುವ ಭಯವಿದೆ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT