ಮಂಗಳವಾರ, ಡಿಸೆಂಬರ್ 7, 2021
20 °C

ಚುನಾವಣೆ ಬಳಿಕ ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನ: ಅಮಿತ್ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಗಡಿ ನಿರ್ಧಾರವಾಗಿ, ವಿಧಾನ ಸಭಾ ಚುನಾವಣೆಗಳು ಪೂರ್ಣ ಗೊಂಡ ಬಳಿಕ ರಾಜ್ಯದ ಸ್ಥಾನಮಾನ ವನ್ನು ಮರು ಸ್ಥಾಪಿಸಲಾಗು ತ್ತದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ  ಭರವಸೆ ನೀಡಿದ್ದಾರೆ. 

ಜಮ್ಮು ಮತ್ತು ಕಾಶ್ಮೀರಕ್ಕೆ ಮೂರು ದಿನಗಳ ಭೇಟಿಗಾಗಿ ಶನಿವಾರ ಶ್ರೀನಗರಕ್ಕೆ ಆಗಮಿಸಿರುವ ಅವರು, ಯೂತ್ ಕ್ಲಬ್ ಸದಸ್ಯರ ಜತೆಗಿನ ಸಂವಾದದಲ್ಲಿ ಈ ಭರವಸೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿಯುತ ಮತ್ತು ಅಭಿವೃದ್ಧಿ ಹೊಂದಿದ ಕಣಿವೆ ನಿರ್ಮಾಣ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕಾಶ್ಮೀರದ ಯುವಕರ ಬೆಂಬಲವನ್ನು ಶಾ ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು