ಮಂಗಳವಾರ, ಜುಲೈ 27, 2021
27 °C

ಉತ್ತರ ಪ್ರದೇಶ: ಅಂಬೇಡ್ಕರ್‌ ಪ್ರತಿಮೆ ವಿರೂಪ; ಸ್ಥಳೀಯರಿಂದ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

ಬಲಿಯಾ (ಉತ್ತರ ಪ್ರದೇಶ): ‘ಇಲ್ಲಿನ ರಾಂಪುರ ಅಸ್ಲಿ ಗ್ರಾಮದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದ್ದು, ಇದನ್ನು ವಿರೋಧಿಸಿ ಸ್ಥಳೀಯರು ಮಂಗಳವಾರ ಪ್ರತಿಭಟನೆ ನಡೆಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಅಪರಿಚಿತ ವ್ಯಕ್ತಿಗಳು ಸೋಮವಾರ ರಾತ್ರಿ ಅಂಬೇಡ್ಕರ್‌ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ’ ಎಂದು ‍ಪ್ರತಿಭಟನಕಾರರು ದೂರಿದ್ದಾರೆ.

‘ಗದ್ವಾರ್‌–ನಾಗ್ರಾ ರಸ್ತೆಯನ್ನು ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಕಾರರ ಮನವೊಲಿಸಿದರು’ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸಂಜಯ್‌ ಯಾದವ್‌ ಅವರು ಹೇಳಿದರು.

‘ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆಯೂ ಹಲವು ಬಾರಿ ಪ್ರತಿಮೆಗೆ ಹಾನಿ ಮಾಡಲಾಗಿತ್ತು ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು