ಮಂಗಳವಾರ, ಮೇ 17, 2022
27 °C

ಕರ್ನಾಟಕದಿಂದ ಕಬ್ಬಿಣ ಅದಿರು ರಫ್ತು ಮೇಲಿನ ನಿರ್ಬಂಧ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕರ್ನಾಟಕದಿಂದ ಕಬ್ಬಿಣ ಅದಿರು ರಫ್ತಿನ ಮೇಲೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕು ಎಂಬ ಬೇಡಿಕೆಗೆ ಉಕ್ಕು ಸಚಿವಾಲಯ ಬೆಂಬಲ ಸೂಚಿಸಿದೆ.

ರಫ್ತಿನ ಮೇಲೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಗಣಿ ಸಚಿವಾಲಯವು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ ಬೆನ್ನಲ್ಲೇ, ಉಕ್ಕು ಸಚಿವಾಲಯದಿಂದ ಇಂಥದೇ ಬೇಡಿಕೆ ವ್ಯಕ್ತವಾಗಿದೆ. ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ನ್ಯಾಯಪೀಠವು ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸೋಮವಾರ (ಏ.18) ನಡೆಸಲಿದೆ.

ಇತರ ರಾಜ್ಯಗಳು ಹಾಗೂ ಕರ್ನಾಟಕದಲ್ಲಿರುವ ಕಬ್ಬಿಣ ಅದಿರು ಗಣಿಗಳ ನಡುವಿನ ತಾರತಮ್ಯ ಕೊನೆಗಾಣಿಸಬೇಕು ಎಂದು ಉಕ್ಕು ಸಚಿವಾಲಯವು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆ. ಹೀಗೆ ಮಾಡುವುದರಿಂದ ಕರ್ನಾಟಕದ ಗಣಿಗಳಿಂದ ಹೊರತೆಗೆಯಲಾದ ಅದಿರನ್ನು ಇತರ ರಾಜ್ಯಗಳಿಗೆ ಮಾರಾಟ ಮಾಡಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರಿನ ಗಣಿಗಾರಿಕೆ ಮೇಲೆ ಮಿತಿ ಹೇರಿ ನೀಡಿರುವ ಆದೇಶವನ್ನು ತೆರವುಗೊಳಿಸಬೇಕು. ಇದರಿಂದ ಅಗತ್ಯ ಪ್ರಮಾಣದ ಅದಿರು ಲಭ್ಯವಾಗುವುದನ್ನು ಖಾತ್ರಿಪಡಿಸಿದಂತಾಗುವುದು ಎಂದೂ ಸಚಿವಾಲಯವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಅದಿರಿನ ರಫ್ತಿನ ಮೇಲೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕು ಎಂಬ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿ ಗಣಿ ಸಚಿವಾಲಯ ಸಲ್ಲಿಸಿದ್ದ ಅರ್ಜಿಯನ್ನು ಸ್ವಯಂಸೇವಾ ಸಂಸ್ಥೆ ಸಮಾಜ ಪರಿವರ್ತನಾ ಸಮುದಾಯ ವಿರೋಧಿಸಿತ್ತು. ಈ ಬೇಡಿಕೆ ಬಗ್ಗೆ ಉಕ್ಕು ಸಚಿವಾಲಯ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಸಂಸ್ಥೆ ಹೇಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು