ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್‌ ಧರಿಸದವರಿಗೆ ಸ್ಥಳದಲ್ಲೇ ದಂಡ: ಡಿಜಿಸಿಎ ಸೂಚನೆ

Last Updated 30 ಮಾರ್ಚ್ 2021, 13:14 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಪ್ರಸರಣ ತಡೆಯುವ ಸಂಬಂಧ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡದ ವಿಮಾನ ಪ್ರಯಾಣಿಕರಿಗೆ ಸ್ಥಳದಲ್ಲಿಯೇ ದಂಡ ವಿಧಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮಂಗಳವಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಡಿಜಿಸಿಎ ಇಂಥ ಸೂಚನೆ ನೀಡಿದೆ. ಅಲ್ಲದೇ, ವಿಮಾನ ನಿಲ್ದಾಣಗಳಲ್ಲಿ ಕಣ್ಗಾವಲನ್ನು ಚುರುಕುಗೊಳಿಸುವಂತೆ ವಿಮಾನ ನಿಲ್ದಾಣಗಳ ನಿರ್ವಹಣೆ ಮಾಡುತ್ತಿರುವ ಸಂಸ್ಥೆಗಳಿಗೆ ರವಾನಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವಿಮಾನ ನಿಲ್ದಾಣಗಳ ಆವರಣದಲ್ಲಿ ಪ್ರತಿಯೊಬ್ಬರೂ ಬಾಯಿ ಹಾಗೂ ಮೂಗು ಮುಚ್ಚುವಂತೆ ಮಾಸ್ಕ್‌ ಧರಿಸಿದ್ದಾರೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಲಾಗುತ್ತಿದೆಯೇ ಎಂಬುದರ ಮೇಲೂ ನಿಗಾ ಇರಿಸುವಂತೆ ಸೂಚಿಸಲಾಗಿದೆ.

ಕೋಲ್ಕತ್ತ–ದೆಹಲಿ ವಿಮಾನದಲ್ಲಿ ಕೋವಿಡ್‌–19 ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದರ ಕುರಿತು ಇತ್ತೀಚೆಗೆ ದೆಹಲಿ ಹೈಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಡಿಜಿಸಿಎ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT