ಬುಧವಾರ, ಆಗಸ್ಟ್ 17, 2022
30 °C

ನಡ್ಡಾ ಬೆಂಗಾವಲು ಪಡೆಯ ಮೇಲಿನ ದಾಳಿ ಯೋಜಿತ ಕೃತ್ಯ ಇರಬಹುದು: ಮಮತಾ ಬ್ಯಾನರ್ಜಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತಾ: ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿ ಯೋಜಿತ ಕೃತ್ಯ ಇರಬಹುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಗುರುವಾರ ಪ್ರತಿಕ್ರಿಯಿಸಿರುವ ಅವರು,'ನಿಮ್ಮೊಂದಿಗೆ ಕೇಂದ್ರ ಭದ್ರತಾ ಪಡೆ ಇದೆ. ಯಾರಾದರೂ ನಿಮ್ಮ ಮೇಲೆ ಹೇಗೆ ದಾಳಿ ಮಾಡಬಹುದು?' ಎಂದು ನಡ್ಡಾ ಅವರನ್ನು ಪ್ರಶ್ನಿಸಿದ್ದಾರೆ.

'ನೀವು ರಾಜ್ಯದ ಭದ್ರತಾ ಪಡೆಗಳನ್ನು ಅವಲಂಬಿಸುವ ಬದಲು, ಕೇಂದ್ರದ ಭದ್ರತಾ ಪಡೆಗಳನ್ನು ಅವಲಂಬಿಸಿದ್ದೀರಿ. ಈ ದಾಳಿಯು ಯೋಜಿತ ಕೃತ್ಯ ಇರಬಹುದು. ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ಆದರೆ, ನಾನು ಎಂದಿಗೂ ಸುಳ್ಳನ್ನು ಹೇಳುವುದಿಲ್ಲ' ಎಂದು ಮಮತಾ ಹೇಳಿದ್ದಾರೆ.

ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು