ಪಶ್ಚಿಮ ಬಂಗಾಳ: ವಂದೇ ಭಾರತ್ ರೈಲು ಆರಂಭವಾದ ನಾಲ್ಕೇ ದಿನಕ್ಕೆ ಕಲ್ಲು ತೂರಾಟ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸೇವೆ ಆರಂಭಿಸಿದ ನಾಲ್ಕೇ ದಿನಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಪಶ್ಚಿಮ ಬಂಗಾಳದ ಮಾಲ್ಡಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರೈಲಿನ ಕಿಟಕಿಗೆ ಹಾನಿಯಾಗಿದೆ.
West Bengal | Stones pelted at Vande Bharat Express connecting Howrah to New Jalpaiguri, 4 days after its launch. The incident took place near Malda station. pic.twitter.com/Nm3XOmffpR
— ANI (@ANI) January 3, 2023
ಕಲ್ಲು ತೂರಾಟದಿಂದ ಯಾರಿಗೂ ಗಾಯವಾಗಿಲ್ಲ. ರೈಲ್ವೆ ಸಂರಕ್ಷಣಾ ಪಡೆ ಈ ಕುರಿತು ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೌರಾ – ಜಲ್‌ಪೈಗುರಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಡಿ.31ರಂದು (ಶನಿವಾರ) ಚಾಲನೆ ನೀಡಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ರೈಲು ಮತ್ತು ಇತರ ಅಭಿವೃದ್ಧಿ ಯೋಜನೆಗಳಿಗೆ ವರ್ಚುವಲ್ ಆಗಿ ಚಾಲನೆ ನೀಡಿದ್ದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.