ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ

Last Updated 12 ಮಾರ್ಚ್ 2023, 5:25 IST
ಅಕ್ಷರ ಗಾತ್ರ

ಹೌರಾ: ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದ್ದು, ರೈಲಿನ ಕೆಲ ಕೋಚ್‌ಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಶನಿವಾರ ತಡರಾತ್ರಿ ಇಲ್ಲಿನ ರೈಲು ನಿಲ್ದಾಣದ ಸಮೀಪ ಈ ಘಟನೆ ನಡೆದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದ್ದಾರೆ.

ತಿಂಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಕಳೆದ ಫೆಬ್ರುವರಿ ಹಾಗೂ ಜನವರಿ ತಿಂಗಳಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಇಂತಹ ಘಟನೆಗಳು ದುರದೃಷ್ಟಕರ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೂರ್ವ ರೈಲ್ವೆಯ ಕೌಶಿಕ್ ಮಿತ್ರ ತಿಳಿಸಿದ್ದಾರೆ.

ರೈಲು ಹೌರದಿಂದ ಮಾಲ್ಡಾ ಮಾರ್ಗವಾಗಿ ಡಾರ್ಜಿಲಿಂಗ್‌ಗೆ ತೆರಳುತ್ತಿತ್ತು. ಈ ವೇಳೆ ಹೌರಾ ನಿಲ್ದಾಣದ ಸಮೀಪದಲ್ಲಿ ಕಲ್ಲು ತೂರಾಟ ನಡೆದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT