ಜೈಪುರ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವ ಹಿಂದೂಗಳ ಮೀಸಲಾತಿ ಸೌಲಭ್ಯವನ್ನು ಹಿಂಪಡೆಯಬೇಕೆಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಬುಧವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.
‘ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಬಳಿಕವೂ ಕೆಲವರು ಇನ್ನೂ ಹಿಂದೂ ಹೆಸರು ಮತ್ತು ರುಜುವಾತುಗಳನ್ನು ದಾಖಲೆಗಳಲ್ಲಿ ಬಳಸಿ, ಪರಿಶಷ್ಟಿ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ನೀಡಲಾದ ಮೀಸಲಾತಿಯ ಲಾಭವನ್ನು ಪಡೆಯುತ್ತಿದ್ದಾರೆ’ ಎಂದುವಿಎಚ್‌ಪಿಯ ರಾಷ್ಟ್ರೀಯ ವಕ್ತಾರ ವಿಜಯ್ ಶಂಕರ್ ತಿವಾರಿ ಅವರು ಆರೋಪಿಸಿದ್ದಾರೆ.
‘ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸೇರಿದ ಹಾಗೂ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವವರಿಗೆ ಮೀಸಲಾತಿ ಸೌಲಭ್ಯ ದೊರೆಯದಂತೆ ಸಮೀಕ್ಷೆ ನಡೆಸಿ ಕೇಂದ್ರ ಸರ್ಕಾರವು ಯೋಜನೆ ರೂಪಿಸಬೇಕು’ ಎಂದಿದ್ದಾರೆ.
ಮುಂಬರುವ ದಿನಗಳಲ್ಲಿ ವಿಎಚ್‌ಪಿ ಈ ಕುರಿತು ಜಾಗೃತಿ ಅಭಿಯಾನವನ್ನು ಕೈಗೊಳ್ಳಲಿದೆ ಎಂದೂ ತಿವಾರಿ ಹೇಳಿದ್ದಾರೆ.
ವಿಎಚ್‌ಪಿಯ ಸ್ಥಳೀಯ ವಕ್ತಾರ ಪ್ರಭಾತ್ ಶರ್ಮಾ ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದವರು ಕ್ರೈಸ್ತ ಧರ್ಮವನ್ನು ಅಳವಡಿಸಿಕೊಂಡಿದ್ದರೂ ಹೆಸರು ಮತ್ತು ಇತರ ರುಜುವಾತುಗಳನ್ನು ಬದಲಾಯಿಸದ ಅನೇಕ ಪ್ರಕರಣಗಳಿವೆ. ಈ ದಾಖಲೆಗಳ ಆಧಾರದ ಮೇಲೆ ಮೀಸಲಾತಿ ಪಡೆಯುತ್ತಿದ್ದಾರೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.