ಬುಧವಾರ, ಜುಲೈ 6, 2022
21 °C

ಹೈದರಾಬಾದ್: ಬೀದಿ ನಾಯಿಗಳ ದಾಳಿಗೆ ಬಲಿಯಾದ ಎರಡೂವರೆ ವರ್ಷದ ಮಗು

ಐಎಎನ್ಎಸ್‌ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಹಲವು ಬೀದಿ ನಾಯಿಗಳ ದಾಳಿಗೆ ಮಗುವೊಂದು ಮೃತಪಟ್ಟಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಗೊಲ್ಕೊಂಡಾದ ಬಾದಾ ಬಜಾರ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಎರಡೂವರೆ ವರ್ಷದ ಅನಸ್ ಅಹ್ಮದ್, ಮನೆಯ ಸಮೀಪದಲ್ಲಿ ಆಟವಾಡುತ್ತಿದ್ದಾಗ ಬೀದಿ ನಾಯಿಗಳು ಮಗು ಮೇಲೆ ದಾಳಿ ನಡೆಸಿವೆ. ಅವುಗಳು ಮಗುವನ್ನು ಪಕ್ಕದ ಸೇನಾ ಪ್ರದೇಶಕ್ಕೆ ಎಳೆದೊಯ್ದಿವೆ.

ಮಗುವಿನ ಚೀರಾಟ ಕೇಳಿದ ಪೋಷಕರು ಮತ್ತು ನೆರೆಹೊರೆಯವರು ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ ಮತ್ತು ನಾಯಿಗಳನ್ನು ಓಡಿಸಿದ್ದಾರೆ. ಮಗುವಿನ ಮುಖ, ಗಂಟಲು ಮತ್ತು ದೇಹದ ಇತರ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮಗುವಿನ ಮೇಲೆ ದಾಳಿ ಮಾಡಿರುವ ಮತ್ತು ಎಳೆದೊಯ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಆಕ್ರೋಷ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಪುರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೂ ಮುನ್ನ ಇಂತದ್ದೇ ರೀತಿಯ ಎರಡು ಘಟನೆಗಳು ನಡೆದಿದ್ದವು. ಆದರೆ ಈ ಬಾರಿ ನಾಯಿಗಳು ಮಗುವಿನ ಪ್ರಾಣವನ್ನೇ ಬಲಿಪಡೆದಿವೆ ಎಂದು ಸ್ಥಳೀಯ ನಿವಾಸಿ ದೂರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು