ಕೋಲ್ಕತ್ತ: ಕೋವಿಡ್–19 ಸೋಂಕು ಹರಡುವಿಕೆ ತಡೆಗೆ ರಾಜ್ಯದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಂಪೂರ್ಣ ಲಾಕ್‌ಡೌನ್ ಘೋಷಿಸಿದರೆ ಜೀವನೋಪಾಯಕ್ಕೆ ಅಡ್ಡಿಯಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಹರಡುವಿಕೆ ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ, ಕೇಂದ್ರ ಸರ್ಕಾರವು ಎಲ್ಲರಿಗೂ ಉಚಿತ ಲಸಿಕೆ ನೀಡಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ಓದಿ:ಪಶ್ಚಿಮ ಬಂಗಾಳ: ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ರಾಜ್ಯಪಾಲರಿಂದ ಶೀಘ್ರ ಭೇಟಿ

ರಾಜ್ಯವು 3 ಕೋಟಿ ಡೋಸ್‌ಗಳಿಗಾಗಿ ಬೇಡಿಕೆ ಇಟ್ಟಿದ್ದು, ಈ ಪೈಕಿ ಒಂದು ಕೋಟಿ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಶಾಂತಿ ನೆಲೆಸಿದೆ ಎಂದು ಪ್ರತಿಪಾದಿಸಿದ ಅವರು, ಚುನಾವಣೋತ್ತರ ಹಿಂಸಾಚಾರದ ಬಗ್ಗೆ ನಕಲಿ ವಿಡಿಯೊಗಳನ್ನು ಹರಿಯಬಿಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.