ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡೀಗಡ ವಿ.ವಿ: ಆಕ್ಷೇಪಾರ್ಹ ವಿಡಿಯೊ ಪ್ರಕರಣ; ವಿದ್ಯಾರ್ಥಿನಿ ಸೇರಿ ಮೂವರ ಬಂಧನ

Last Updated 19 ಸೆಪ್ಟೆಂಬರ್ 2022, 1:28 IST
ಅಕ್ಷರ ಗಾತ್ರ

ಚಂಡೀಗಡ:ಹಲವು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೊಗಳನ್ನು ವಿದ್ಯಾರ್ಥಿನಿಯೊಬ್ಬರು ಚಿತ್ರೀಕರಿಸಿದ್ದಾರೆ ಎಂಬ ಪ್ರಕರಣದಲ್ಲಿ ಪ್ರಾಥಮಿಕ ತನಿಖೆಯ ಬಳಿಕ ಪೊಲೀಸರು ವಿದ್ಯಾರ್ಥಿನಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಪಂಜಾಬ್‌ನ ಮೊಹಾಲಿಯ ಚಂಡೀಗಡವಿಶ್ವವಿದ್ಯಾಲಯದ ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬರು ಇತರರಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರಿಕರಿಸಿ ತನ್ನ ಗೆಳೆಯರಿಗೆ ಕಳುಹಿಸಿದ್ದರು ಎಂಬ ವದಂತಿ ಹರಡಿತ್ತು.ಒಬ್ಬ ವಿದ್ಯಾರ್ಥಿನಿಯು ತನ್ನ ವಿಡಿಯೊವನ್ನು ಯುವಕನೊಬ್ಬನ ಜೊತೆ ಹಂಚಿಕೊಂಡಂತೆ ಕಾಣಿಸುತ್ತಿದೆ. ಇತರ ಯಾವುದೇ ವಿದ್ಯಾರ್ಥಿನಿಯ ಆಕ್ಷೇಪಾರ್ಹವಾದ ವಿಡಿಯೊ ಸಿಕ್ಕಿಲ್ಲ ಎಂದು ಪಂಜಾಬ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ ಗುರ್‌ಪ್ರೀತ್‌ ಕೌರ್‌ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಬಳಿಕ ಒಬ್ಬ ಆರೋಪಿ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.ವಿದ್ಯಾರ್ಥಿನಿಯ ಮೊಬೈಲನ್ನು ಪೊಲೀಸರು ವಶಕ್ಕೆ ಪಡೆದು,ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

ಆರೋಪಿ ವಿದ್ಯಾರ್ಥಿನಿಯ ಗೆಳೆಯ ಸನ್ನಿ ಮೆಹ್ತಾ ಎಂದು ಹೇಳಲಾದ ಯುವಕನೊಬ್ಬನನ್ನು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಬಂಧಿಸಲಾಗಿದೆ. ಸನ್ನಿ ಮೆಹ್ತಾ ಟ್ರಾವಲ್‌ ಎಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ಶಿಮ್ಲಾದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ವ್ಯಕ್ತಿಯ ಮಾಹಿತಿ ಬಹಿರಂಗವಾಗಿಲ್ಲ.

ಹಾಸ್ಟೆಲ್‌ನಲ್ಲಿ ಇರುವ ಹಲವು ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿದೆ ಎಂಬುದು ಸುಳ್ಳು ಮತ್ತು ಆಧಾರರಹಿತ. ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದೂ ಸುಳ್ಳು ಎಂದು ವಿಶ್ವವಿದ್ಯಾಲಯ ಹೇಳಿದೆ.

ಈ ಘಟನೆ ಕುರಿತಂತೆಚಂಡೀಗಡ ವಿಶ್ವವಿದ್ಯಾಲಯದಲ್ಲಿ ಶನಿವಾರ ರಾತ್ರಿಭಾರಿ ಪ್ರತಿಭಟನೆ ನಡೆದಿದೆ. ಹಾಗೇ ಈ ಕುರಿತು ತನಿಖೆ ನಡೆಸಲು ಮುಖ್ಯಮಂತ್ರಿ ಭಗವಂತ ಮಾನ್‌ ಆದೇಶ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT