ನಾಗ್ಪುರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಲ್ಲಿನ ಐಟಿಐನ ವಿದ್ಯಾರ್ಥಿನಿಯೊಬ್ಬರು ನಾಗ್ಪುರ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ರಾಣಿ ಅಮರ್‌ದೀಪ್ ಧನ್‌ವಿಜಯ್ ಎಂಬುವರು ಐಟಿಐ ಕಾಲೇಜಿನ ಆವರಣದಲ್ಲೇ ಮಾರ್ಚ್ 6ರಂದು ವಿಷಸೇವಿಸಿ, ಪ್ರಜ್ಞಾಹೀನರಾಗಿ ಬಿದ್ದಿದ್ದರು. ಅವರನ್ನು ವಿದ್ಯಾರ್ಥಿಗಳೇ ಆಸ್ಪತ್ರೆಗೆ ದಾಖಲಿಸಿದ್ದರು. ರಾಣಿ ಅಮರ್‌ದೀಪ್ ಅವರು ಶನಿವಾರ ರಾತ್ರಿ ಸಾವಿಗೀಡಾಗಿದ್ದು, ಅವರದ್ದು ಆಕಸ್ಮಿಕ ಸಾವು ಎಂದು ಇಲ್ಲಿನ ಧಾಂತೋಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆತ್ಮಹತ್ಯೆಗೆ ಹಿಂದಿನ ಕಾರಣ ಇದುವರೆಗೆ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.