ಬಿಜ್ನೋರ್ (ಉತ್ತರ ಪ್ರದೇಶ): ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ 11ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ನಡೆದ 12ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಘಟನೆ ನಡೆದಿರುವುದಾಗಿ ದಲಿತ ವಿದ್ಯಾರ್ಥಿ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಬಿಜ್ನೋರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರ್ಜ್ ತಿಳಿಸಿದ್ದಾರೆ.
ಬಿಜ್ನೋರ್‌ನ ಶಾಲೆಯೊಂದರ ವಿದ್ಯಾರ್ಥಿಯು ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದಿದ್ದ. ಅದಕ್ಕೆ ಪ್ರಾಂಶುಪಾಲ ಯೋಗೇಂದ್ರ ಕುಮಾರ್ ಮತ್ತು ಅವರ ಸಹೋದರರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ನಿಂದಿಸಿದ್ದಾರೆ ಎಂದು ಅರ್ಜ್ ಹೇಳಿದ್ದಾರೆ.
ಪ್ರಾಂಶುಪಾಲರು ಸೇರಿದಂತೆ ಏಳು ಮಂದಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.