ಕ್ಯಾಂಪಸ್‌ನಲ್ಲಿ BBC ಸಾಕ್ಷ್ಯಚಿತ್ರ ತೋರಿಸಿದ ಹೈದರಾಬಾದ್ ವಿವಿ ವಿದ್ಯಾರ್ಥಿಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಹೆಸರಿನ ಸಾಕ್ಷ್ಯಚಿತ್ರವನ್ನು ಹೈದರಾಬಾದ್ ವಿಶ್ವವಿದ್ಯಾಲಯದ ಕೆಲ ವಿದ್ಯಾರ್ಥಿಗಳು ವಿವಿ ಕ್ಯಾಂಪಸ್‌ನಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಿದ್ದಾರೆ.
ಅನುಮತಿ ಪಡೆಯದೇ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿರುವುದಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಭದ್ರತಾ ಅಧಿಕಾರಿಯಿಂದ ವರದಿ ಕೇಳಿದೆ.
ವಿವಿಯ ವಿಭಾಗವೊಂದರ ಕೆಲ ವಿದ್ಯಾರ್ಥಿಗಳು ವಿವಿ ಆಡಳಿತ ಮಂಡಳಿ ಅಥವಾ ಸಂಬಂಧಿಸಿದವರ ಗಮನಕ್ಕೆ ತಾರದೇ ಭಾತೃತ್ವ ಚಳವಳಿ ಹೆಸರಿನಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್ ಸಾಕ್ಷ್ಯಚಿತ್ರವನ್ನು’ ಪ್ರದರ್ಶಿಸಿದ್ದಾರೆ ಎಂದು ದೂರಲಾಗಿದೆ.
ಈ ಕುರಿತು ವಿವಿ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ವಿವಿ ವಿರುದ್ಧ ಎಬಿವಿಪಿ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.
2002ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನಡೆದಿದ್ದ ಗೋಧ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತಹ ಕೆಲವು ವಿಷಯಗಳ ತನಿಖೆಯ ವಿಷಯವಿದು ಎಂದು ಎರಡು ಕಂತಿನ ಸಾಕ್ಷ್ಯಚಿತ್ರದಲ್ಲಿ ಹೇಳಲಾಗಿದೆ. ಆದರೆ, ಇದನ್ನು ತಳ್ಳಿಹಾಕಿರುವ ವಿದೇಶಾಂಗ ಸಚಿವಾಲಯವು, ಇದೊಂದು ಅಪಪ್ರಚಾರದ ಉದ್ದೇಶ ಹೊಂದಿರುವ ಸಾಕ್ಷ್ಯಚಿತ್ರ ಮತ್ತು ವಸ್ತುನಿಷ್ಠವಲ್ಲದ ಹಾಗೂ ವಸಾಹತುಶಾಹಿ ಮನಸ್ಥಿತಿಯ ಪ್ರತಿಬಿಂಬವಾಗಿದೆ ಎಂದು ಹೇಳಿದೆ.
12,000 ಮಂದಿಯನ್ನು ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು: ಪಿಚೈ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.