ಬುಧವಾರ, ಆಗಸ್ಟ್ 10, 2022
23 °C

ಚಳಿಗಾಲದಲ್ಲಿ ವಾಯುಮಾಲಿನ್ಯ ತಡೆಗೆ ಕಾರ್ಯಯೋಜನೆ ವರದಿ ಸಲ್ಲಿಸಿ: ಗೋಪಾಲ್‌ ರೈ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿಗಾಲದಲ್ಲಿ ಉದ್ಭವಿಸುವ ವಾಯುಮಾಲಿನ್ಯ ಸಮಸ್ಯೆ ನಿಯಂತ್ರಿಸಲು ತೆಗೆದುಕೊಂಡ ಕಾರ್ಯಯೋಜನೆಗಳನ್ನು ಸೆ.21ರೊಳಗಾಗಿ ಸಲ್ಲಿಸುವಂತೆ ತಮ್ಮ ಇಲಾಖೆ ಹಾಗೂ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಗೆ, ಪರಿಸರ ಇಲಾಖೆ ಸಚಿವ ಗೋಪಾಲ್‌ ರೈ ಮಂಗಳವಾರ ಸೂಚಿಸಿದ್ದಾರೆ. 

ಕಾರ್ಯಯೋಜನೆಗಳನ್ನು ರಚಿಸುವ ಸಂದರ್ಭದಲ್ಲಿ ವಾಯುಗುಣಮಟ್ಟ ಕಡಿಮೆಯಾಗಲು ಕಾರಣಗಳೇನು ಎನ್ನುವುದನ್ನು ಸ್ಪಷ್ಟವಾಗಿ ಉಲ್ಲೇಖಿಸಲು ರೈ ತಿಳಿಸಿದ್ದಾರೆ.

‘ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯವನ್ನು ಸುಡುವುದು, ರಸ್ತೆಯಲ್ಲಿನ ದೂಳು, ಕಟ್ಟಡ ನಿರ್ಮಾಣ ಚಟುವಟಿಕೆ, ತ್ಯಾಜ್ಯ ಸುಡುವುದು, ಕೈಗಾರಿಕೆಗಳು ಮತ್ತು ವಾಹನಗಳ ಹೊಗೆಯಿಂದಾಗಿ ಚಳಿಗಾಲದಲ್ಲಿ ದೆಹಲಿಯ ವಾಯುಗುಣಮಟ್ಟ ಕುಸಿಯುತ್ತಿದೆ. ಈ ಸಮಸ್ಯೆಗಳಿಗೆ ಪ್ರತ್ಯೇಕ ಪರಿಹಾರ ಸೂಚಿಸಿ ಕಾರ್ಯಯೋಜನೆ ರೂಪಿಸಬೇಕು’ ಎಂದು ಸಚಿವರು ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

‘ದೆಹಲಿಯಲ್ಲಿ ಪ್ರತಿ ಚಳಿಗಾಲದಲ್ಲಿ ವಾಯುಗುಣಮಟ್ಟ ಕುಸಿಯಲು ಹರಿಯಾಣ ಮತ್ತು ಪಂಜಾಬ್‌ನ ರೈತರು ಕೃಷಿ ತ್ಯಾಜ್ಯ ಸುಡುವುದೇ ಪ್ರಮುಖ ಕಾರಣವಾಗಿದೆ’ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು