ಬುಧವಾರ, ಆಗಸ್ಟ್ 4, 2021
28 °C

ಸಿಬಿಐ ನಿರ್ದೇಶಕರಾಗಿ ಸುಬೋಧ್‌ ಜೈಸ್ವಾಲ್‌ ಅಧಿಕಾರ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಸಿಬಿಐ ನಿರ್ದೇಶಕರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು.

ಜೈಸ್ವಾಲ್‌ ಅವರು ಮಹಾರಾಷ್ಟ್ರ ಕೇಡರ್‌ನ 1985ರ ಬ್ಯಾಚ್‌ನ ಅಧಿಕಾರಿ. ಅವರು ಇಲ್ಲಿಯವರೆಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್‌) ಮಹಾ ನಿರ್ದೇಶಕರಾಗಿದ್ದರು. ಅವರು ಮಹಾರಾಷ್ಟ್ರದ ಪೊಲೀಸ್ ಮಹಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಿಬಿಐನ ನಿರ್ದೇಶಕರಾಗಿದ್ದ ರಿಷಿ ಕುಮಾರ್‌ ಶುಕ್ಲಾ ಅವರ ಎರಡು ವರ್ಷಗಳ ಅಧಿಕಾರವಧಿ ಫೆಬ್ರುವರಿ 3ಕ್ಕೆ ಮುಗಿದಿತ್ತು. ಅಲ್ಲಿಂದೀಚೆಗೆ ಸಿಬಿಐ ನಿರ್ದೇಶಕರ ಹುದ್ದೆ ಖಾಲಿ ಇತ್ತು.

ಇದನ್ನೂ ಓದಿ... ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು