ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಂ ರಾಷ್ಟ್ರಗಳು ಅಯೋಧ್ಯೆ ದಾಳಿಯನ್ನು ಅರಿತುಕೊಳ್ಳಲಿ: ಸುಬ್ರಮಣಿಯನ್‌ ಸ್ವಾಮಿ

ಅಕ್ಷರ ಗಾತ್ರ

ಬೆಂಗಳೂರು: ಪ್ರವಾದಿ ಮಹಮ್ಮದ್‌ ಅವಹೇಳನೆ ವಿಚಾರವಾಗಿ ಮುಸ್ಲಿಂ ರಾಷ್ಟ್ರಗಳಿಂದ ವ್ಯಾಪಕ ಪ್ರತಿರೋಧ ವ್ಯಕ್ತವಾದ ಬೆನ್ನಲ್ಲೇ, 2006ರಲ್ಲಿ ಆಯೋಧ್ಯೆಯಲ್ಲಿ ಘಟನೆಯ ಕುರಿತು ಅರಿತುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಆಗ್ರಹಿಸಿದ್ದಾರೆ.

'ಮಾರ್ಚ್‌ 8, 2006ರಲ್ಲಿ ಮುಸ್ಲಿಂ ಉಗ್ರಗಾಮಿಗಳು ಅಯೋಧ್ಯೆಯ ಸಂಕಟ ಮೋಚನ ದೇವಸ್ಥಾನದಲ್ಲಿ ಬಾಂಬ್‌ ಇಟ್ಟು ಸ್ಫೋಟಿಸಿದ್ದರು. ಇದನ್ನು ಮುಸ್ಲಿಂ ರಾಷ್ಟ್ರಗಳು ಅರಿತುಕೊಳ್ಳಬೇಕು. ಸ್ಫೋಟದಿಂದ ಕನಿಷ್ಠ 14 ಪೂಜಾರಿಗಳು ಪ್ರಾಣ ಕಳೆದುಕೊಂಡರು. ನೂರಕ್ಕೂ ಹೆಚ್ಚು ಭಕ್ತರು ಗಾಯಗೊಂಡರು. ಇದೇ ಮುಸ್ಲಿಂ ರಾಷ್ಟ್ರಗಳು ಈ ಘಟನೆಯನ್ನು ವಿರೋಧಿಸಿದ್ದವೇ? ಈ ಬಗ್ಗೆ ದಿ ನ್ಯೂಯಾರ್ಕ್‌ ಟೈಮ್ಸ್‌ ಸಂಪೂರ್ಣ ವರದಿಯನ್ನು ಪ್ರಕಟಿಸಿತ್ತು' ಎಂದು ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಟಿವಿ ಸಂವಾದದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಅವರು ಪ್ರವಾದಿ ಮಹಮ್ಮದ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ವಿವಾದವು ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಬೆನ್ನಲ್ಲೇ ಮುಸ್ಲಿಂ ರಾಷ್ಟ್ರಗಳು ಆಕ್ಷೇಪಿಸಿವೆ. ಬೆನ್ನಲ್ಲೇ ಇದೇ ವಿಚಾರಕ್ಕೆ ಸಂಬಂಧಿಸಿ ನೂಪುರ್‌ ಶರ್ಮ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT