ಶುಕ್ರವಾರ, ಡಿಸೆಂಬರ್ 3, 2021
20 °C

ಕೋವಿಡ್‌ ಲಸಿಕಾ ಅಭಿಯಾನದ ಯಶಸ್ಸು ಭಾರತದ ಸಾಮರ್ಥ್ಯ ತೋರಿದೆ: ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಭಾರತದ ಕೋವಿಡ್‌ ಲಸಿಕಾ ಅಭಿಯಾನದ ಯಶಸ್ಸು ದೇಶದ ಸಾಮರ್ಥ್ಯವನ್ನು ತೋರಿದ್ದು, 100 ಕೋಟಿ ಲಸಿಕೆಯ ಡೋಸ್‌ಗಳ ಮೈಲಿಗಲ್ಲನ್ನು ದಾಟಿದ ನಂತರ ಹೊಸ ಶಕ್ತಿಯೊಂದಿಗೆ ಮುಂದುವರಿಯುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.  

ತಮ್ಮ ಮಾಸಿಕ ‘ಮನ್‌ ಕಿ ಬಾತ್‌’ನಲ್ಲಿ ಭಾನುವಾರ ಮಾತನಾಡಿದ ಅವರು. ಈ ಸಾಧನೆಗೆ ಕಾರಣರಾದ ಆರೋಗ್ಯ ಕಾರ್ಯಕರ್ತರನ್ನು ಶ್ಲಾಘಿಸಿದರು.

‘ಆರೋಗ್ಯ ಕಾರ್ಯಕರ್ತರು ದೇಶದಲ್ಲಿ ಲಸಿಕೆ ಹಾಕಿಸಿಕೊಳ್ಳದ ಯಾರನ್ನೂ ಬಿಡುವುದಿಲ್ಲ ಎಂದು ನನಗೆ ತಿಳಿದಿದೆ’ ಎಂದೂ ಪ್ರಧಾನಿ ಹೇಳಿದರು.  

‘ನಮ್ಮ ಲಸಿಕಾ ಅಭಿಯಾನದ ಯಶಸ್ಸು ಭಾರತದ ಸಾಮರ್ಥ್ಯ ಮತ್ತು ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರುತ್ತದೆ. ಈ ಮೈಲಿಗಲ್ಲನ್ನು ದಾಟಿದ ನಂತರ ದೇಶವು ಹೊಸ ಶಕ್ತಿ ಮತ್ತು ಉತ್ಸಾಹದಿಂದ ಮುನ್ನಡೆಯುತ್ತಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.  

ಇದನ್ನೂ ಓದಿ– 

ಅಕ್ಟೋಬರ್‌ 21 ರಂದು ಭಾರತವು ಕೋವಿಡ್‌ ವಿರುದ್ಧದ ತನ್ನ ಲಸಿಕಾ ಅಭಿಯಾನದ ಕಾರ್ಯಕ್ರಮದಲ್ಲಿ 100 ಕೋಟಿ ಲಸಿಕೆಯ ಡೋಸ್‌ಗಳನ್ನು ಪೂರೈಸಿತ್ತು.

‘ಭಾರತವು ಯಾವಾಗಲೂ ವಿಶ್ವಶಾಂತಿಗಾಗಿ ಕೆಲಸ ಮಾಡುತ್ತಿದೆ. ಅದರ ಭಾಗವಾಗಿ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳಿಗೆ ನೆರವು ನೀಡಿದೆ' ಎಂದು ಪ್ರಧಾನಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು